ಟಿಕೆಟ್ ಕಳೆದುಕೊಳ್ಳುವ ಭೀತಿಯಲ್ಲಿ ಸಂಸದ ಪ್ರತಾಪ್ ಸಿಂಹ: ಯದುವೀರ್ ಒಡೆಯರ್ ರಾಜಕೀಯ ಪ್ರವೇಶ?

yaduveer wadiyar
09/03/2024

ಬೆಂಗಳೂರು: ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಸಂಸದ ಪ್ರತಾಪ್ ಸಿಂಹ ಅವರು ಈ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ವಂಚಿತರಾಗಲಿದ್ದಾರೆ ಎನ್ನುವ ಮಾತುಗಳು ಬಿಜೆಪಿ ವಲಯದಲ್ಲಿ ಕೇಳಿ ಬರುತ್ತಿದೆ.

ಈ ಬಾರಿ ಮೈಸೂರಿನ ರಾಜ ಯದುವೀರ್ ಒಡೆಯರ್ ಅವರನ್ನು ಬಿಜೆಪಿಯಿಂದ ಕಣಕ್ಕಿಳಿಸಲು ಬಿಜೆಪಿ ಚಿಂತನೆ ನಡೆಸಿದ್ದು, ಮೈಸೂರು ಭಾಗದಲ್ಲಿ ಬಿಜೆಪಿಗೆ ಇನ್ನಷ್ಟು ಬಲ ಸಿಗುವ ನಿಟ್ಟಿನಲ್ಲಿ ಬಿಜೆಪಿ ಈ ಚಿಂತನೆ ನಡೆಸಿದೆ ಎಂದು ಹೇಳಲಾಗಿದೆ.

ಸಾಕಷ್ಟು ದಿನಗಳಿಂದಲೂ ಈ ಬಾರಿ ಪ್ರತಾಪ್ ಸಿಂಹ ಬಿಜೆಪಿ ಟಿಕೆಟ್ ವಂಚಿತರಾಗಲಿದ್ದಾರೆ ಎಂದು ಹೇಳಲಾಗುತ್ತಿದೆ. ಆದ್ರೆ ಇದೀಗ ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಯದುವೀರ್ ಒಡೆಯರ್ ಹೆಸರು ಪ್ರಸ್ತಾಪವಾಗಿದೆ ಎಂದು ಹೇಳಲಾಗಿದೆ.

ಯದುವೀರ್ ಅವರು ರಾಜಕೀಯಕ್ಕೆ ಎಂಟ್ರಿ ನೀಡಿದರೆ ಪ್ರತಾಪ್ ಸಿಂಹ ಬಿಜೆಪಿ ಟಿಕೆಟ್ ಕಳೆದುಕೊಳ್ಳಲಿದ್ದಾರೆ.  ಇದೀಗ ಪ್ರತಾಪ್ ಸಿಂಹ ಅವರ ರಾಜಕೀಯ ಜೀವನಕ್ಕೆ ಸಂಕಷ್ಟ ಎದುರಾಗಿದೆ.

ಯದುವೀರ್ ಅವರನ್ನು ಬಿಜೆಪಿಯತ್ತ ಸೆಳೆದರೆ, ಹಳೆಯ ಮೈಸೂರು ಭಾಗ ಹಾಗೂ ಇಡೀ ಕರ್ನಾಟಕದಲ್ಲೇ ಜನರನ್ನು ಬಿಜೆಪಿಗೆ ಸೆಳೆಯಬಹುದು ಎನ್ನುವುದು ಬಿಜೆಪಿಯ ಲೆಕ್ಕಾಚಾರವಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ

Exit mobile version