ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಅವರಿಗೆ ಅನಾರೋಗ್ಯ: ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ

ಬೆಂಗಳೂರು: ಚಾಮರಾಜನಗರ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಅವರು ಅನಾರೋಗ್ಯಕ್ಕೀಡಾಗಿದ್ದು, ಅವರಿಗೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ವರದಿಗಳ ಪ್ರಕಾರ, ಸದ್ಯ ಅವರಿಗೆ ಐಸಿಯು ವೆಂಟಿಲೇಟರ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದ್ದು, ಸೋಮವಾರ ರಾತ್ರಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ತಿಳಿದು ಬಂದಿದೆ.
ಕಾಲಿನ ಗಾಯ ಉಲ್ಬಣಗೊಂಡ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇನ್ನೆರಡು ದಿನಗಳ ಕಾಲ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನಡೆಯಲಿದ್ದು, ನಂತರ ವಾರ್ಡ್ ಗೆ ಶಿಫ್ಟ್ ಮಾಡಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ.
ಹಿರಿಯ ರಾಜಕಾರಣಿ ಶ್ರೀನಿವಾಸ್ ಪ್ರಸಾದ್ ಅವರು ಇತ್ತೀಚೆಗೆ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದರು. ಸದ್ಯ ಶ್ರೀನಿವಾಸ್ ಪ್ರಸಾದ್ ಅವರಿಗೆ ಡಾ.ಸುದರ್ಶನ್ ಬಲ್ಲಾಳ್ ನೇತೃತ್ವದ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth