ಸಂಸದ ವಿ.ಶ್ರೀನಿವಾಸ ಪ್ರಸಾದ್ ಇನ್ನಿಲ್ಲ - Mahanayaka
11:20 AM Friday 19 - December 2025

ಸಂಸದ ವಿ.ಶ್ರೀನಿವಾಸ ಪ್ರಸಾದ್ ಇನ್ನಿಲ್ಲ

shrinivas prasad
29/04/2024

ಬೆಂಗಳೂರು: ಚಾಮರಾಜನಗರ ಲೋಕಸಭಾ ಕ್ಷೇತ್ರದ ಸಂಸದ ವಿ.ಶ್ರೀನಿವಾಸ ಪ್ರಸಾದ್ ಅವರು ಬೆಂಗಳೂರಿನ ಓಲ್ಡ್‌ ಏರ್‌ಪೋರ್ಟ್‌ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಬಹು ಅಂಗಾಂಗ ಸಮಸ್ಯೆಗಳಿಂದ ಬಳಲುತ್ತಿದ್ದ ಶ್ರೀನಿವಾಸ ಪ್ರಸಾದ್(76) ಅವರು ಕಳೆದ 3 ದಿನಗಳಿಂದಲೂ ಬೆಂಗಳೂರಿನ ಓಲ್ಡ್‌ ಏರ್‌ ಪೋರ್ಟ್‌ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ನಿನ್ನೆ ರಾತ್ರಿ 1:20ರ ಸುಮಾರಿಗೆ ಹೃದಯಾಘಾತದಿಂದ ಅವರು ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.

ಮೈಸೂರಿನ ಅಶೋಕಪುರಂ ಶಾಲಾ ಆವರಣದಲ್ಲಿ ಬೆಳಗ್ಗೆ 11:30ರಿಂದ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ. ಸಕಲ ಸರ್ಕಾರಿ ಗೌರವದೊಂದಿಗೆ ಸಂಜೆ ಅಂಬೇಡ್ಕರ್​ ಟ್ರಸ್ಟ್​​ ಆವರಣದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಮಣಿಪಾಲ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ವೇಳೆ ಅವರ ಆರೋಗ್ಯದಲ್ಲಿ ಸ್ವಲ್ಪ ಚೇತರಿಕೆ ಕಂಡು ಬಂದಿತ್ತು. ಎಲ್ಲರ ಜೊತೆಗೂ ಮಾತನಾಡಿದ್ದರು. ಆದರೆ ಭಾನುವಾರದಿಂದ ಮಾತನಾಡಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಅವರಿಗೆ ಪೆನ್ನು ಪೇಪರ್ ಕೊಟ್ಟ ವೇಳೆ ಕಾಫಿ ಎಂದು ಬರೆದಿದ್ದರು. 2 ಗುಟುಕು ಕುಡಿದ್ದರು. ಮಧ್ಯರಾತ್ರಿ ಅವರು ನಿಧನರಾಗಿದ್ದಾರೆ ಎಂದು ತಿಳಿಸಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ