ಬಿಜೆಪಿಗೆ ಬಿಗ್ ಶಾಕ್: ಟಿಕೆಟ್ ಕೈತಪ್ಪುವ ಭೀತಿಯಲ್ಲಿರುವ ಮೂವರು ಸಂಸದರು ಕಾಂಗ್ರೆಸ್ ಸಂಪರ್ಕದಲ್ಲಿ!

d.k shivakumar
13/03/2024

ಕಲಬುರಗಿ: ರಾಜ್ಯ ಬಿಜೆಪಿಯಲ್ಲಿ ಟಿಕೆಟ್ ಗೊಂದಲ ದಟ್ಟವಾಗಿದೆ. ಈ ನಡುವೆ ಟಿಕೆಟ್ ಕೈತಪ್ಪುವ ಭೀತಿಯಲ್ಲಿರುವ ಮೂವರು ಹಾಲಿ ಸಂಸದರು ಕಾಂಗ್ರೆಸ್ ಸಂಪರ್ಕದಲ್ಲಿದ್ದಾರೆ ಎಂದು ಹೇಳಲಾಗಿದೆ.

ಹೌದು..! ಈ ಬಗ್ಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿಕೆ ನೀಡಿದ್ದು, ಬಿಜೆಪಿಯ ಮೂವರು ಹಾಲಿ ಸಂಸದರು ನಮ್ಮ ಸಂಪರ್ಕದಲ್ಲಿದ್ದು, ಕಾಂಗ್ರೆಸ್ ಪಕ್ಷಕ್ಕೆ ಬರುವುದರ ಬಗ್ಗೆ ಮಾತನಾಡಿದ್ದಾರೆ ಎಂದು ಹೇಳಿದ್ದಾರೆ.

ನಮ್ಮ ಜೊತೆ ಯಾರ‍್ಯಾರು ಸಂಪರ್ಕದಲ್ಲಿದ್ದಾರೆ ಎನ್ನುವುದರ ಬಗ್ಗೆ ನಾನು ಈಗಲೇ ಬಹಿರಂಗಪಡಿಸುವುದಿಲ್ಲ. ನಮ್ಮ ಪಕ್ಷವನ್ನು ಒಪ್ಪಿ, ನಮ್ಮ ಸಿದ್ಧಾಂತಗಳನ್ನು ಒಪ್ಪಿ ಬರುವುದಾದರೆ ಬನ್ನಿ ಎಂದು ಹೇಳಿದ್ದೇನೆ. ಬಹಳ ಜನ ಬಿಜೆಪಿಗೆ ಬರುವವರು ಇದ್ದಾರೆ ಎಂದು ಹೇಳಿದರು.

ನಾವು ಚುನಾವಣೆಗಾಗಿ ಗ್ಯಾರಂಟಿ ಯೋಜನೆಗಳನ್ನು ಕೊಡುತ್ತಿಲ್ಲ. ನಾವು ಜನರ ಬದುಕಿಗಾಗಿ ಗ್ಯಾರಂಟಿ ಕೊಟ್ಟಿದ್ದೇವೆ. ನಮಗೆ ವೋಟ್ ಮುಖ್ಯ ಅಲ್ಲ ಎಂದ ಅವರು, ಕೊರೊನಾ ಸಂದರ್ಭದಲ್ಲಿ ಮೂರರಷ್ಟು ದುಪ್ಪಟ್ಟು ಹಣ ಪಡೆಯುತ್ತಿದ್ದರು. ಆಗ ಕ್ಷಣಾರ್ಧದಲ್ಲೆ ಉಚಿತ ಬಸ್ ನೀಡುವ ಯೋಜನೆ ನೀಡಲಾಗಿದೆ ಎಂದರು.

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 20 ಸೀಟ್ ಗೆಲ್ಲುತ್ತೆ. ಬಿಜೆಪಿಯವರು ಹಾಲಿ ಹತ್ತು ಸಂಸದರನ್ನ ಬದಲಾವಣೆ ಮಾಡ್ತಿದ್ದಾರೆ. ಡಾ.ಸಿ.ಎನ್. ಮಂಜುನಾಥ್, ಎಚ್.ಡಿ. ದೇವೆಗೌಡರು, ಎಚ್.ಡಿ.ಕುಮಾರಸ್ವಾಮಿ ಬಗ್ಗೆ ಗೌರವ ಇದೆ. ದೇವೇಗೌಡರ ಎದುರು ಹೆಣ್ಣು ಮಗಳನ್ನ ನಿಲ್ಲಿಸಿ ಗೆದ್ದಿದ್ದೇವೆ. ಕುಮಾರಸ್ವಾಮಿ, ದೇವೇಗೌಡರ ಮೇಲೆ ಗೆದ್ದಿದ್ದೇವೆ ಎಂದು ಹೇಳಿದರು.

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

 

ಇತ್ತೀಚಿನ ಸುದ್ದಿ

Exit mobile version