ಬಜರಂಗದಳದ ಕಾರ್ಯಕರ್ತರ ಗಡಿಪಾರು: ಪೇಜಾವರ ಶ್ರೀ, ಬಿಜೆಪಿ ವಿರೋಧಕ್ಕೆ ಜಿ.ಪರಮೇಶ್ವರ್ ಉತ್ತರ - Mahanayaka
3:45 PM Monday 15 - September 2025

ಬಜರಂಗದಳದ ಕಾರ್ಯಕರ್ತರ ಗಡಿಪಾರು: ಪೇಜಾವರ ಶ್ರೀ, ಬಿಜೆಪಿ ವಿರೋಧಕ್ಕೆ ಜಿ.ಪರಮೇಶ್ವರ್ ಉತ್ತರ

g parameshwar
17/11/2023

ಬೆಂಗಳೂರು: ಯಾವುದೇ ವ್ಯಕ್ತಿಗಳಾಗಲೀ ಸಂಘಟನೆಗಳಾಗಲೀ ಕಾನೂನಿನ ವಿರುದ್ಧವಾಗಿ ನಡೆದುಕೊಂಡಲ್ಲಿ ಅಂತವರ ವಿರುದ್ಧ  ಕ್ರಮಕೈಗೊಳ್ಳುವುದು ಅನಿವಾರ್ಯ ಎಂದು ಗೃಹ ಸಚಿವ  ಜಿ ಪರಮೇಶ್ವರ್ ಎಚ್ಚರಿಕೆ ನೀಡಿದ್ದಾರೆ.


Provided by

ಬಜರಂಗದಳದ ಕಾರ್ಯಕರ್ತರ ಗಡಿಪಾರಿಗೆ ನೋಟಿಸ್ (ಗಡೀಪಾರು ಸೂಚನೆ) ನೀಡಿರುವ ವಿಚಾರವಾಗಿ ಪೇಜಾವರ ಶ್ರೀ, ಬಿಜೆಪಿ ವಿರೋಧ ವಿಚಾರಕ್ಕೆ ನಗರದಲ್ಲಿಂದು ಸುದ್ದಿಗಾರರಿಗೆ  ಪ್ರತಿಕ್ರಿಯಿಸಿದರು.

ಕಾನೂನು ಪೊಲೀಸ್ ಇಲಾಖೆ ಯಾವ ಕೆಲಸ ಮಾಡಿಲ್ಲ. ಬಜರಂಗದಳ ಆಗಲಿ ಯಾವುದೇ ಸಂಘ ಸಂಸ್ಥೆಗಳು ಆಗಲಿ, ವೈಯಕ್ತಿಕವಾಗಿ ಕಾನೂನು ಪ್ರಕಾರ ಏನೇ ಮಾಡಿದರೂ ನಮ್ಮ ಸರ್ಕಾರ ಅವರ ಜೊತೆ ಇರುತ್ತದೆ. ಕಾನೂನಿನ ವಿರುದ್ಧವಾಗಿ ಕೆಲಸ ಮಾಡಿದರೆ ಏನು ಮಾಡಬೇಕು? ಕಾನೂನು ಹಾಗೂ ಶಾಂತಿ ಕಾಪಾಡಲು  ದೃಷ್ಟಿಯಲ್ಲಿ ಪೊಲೀಸ್ ಇಲಾಖೆ ಇದ್ದು, ತಪ್ಪು ಮಾಡಿದವರ ವಿರುದ್ಧ ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಎಂದು ಗಡಿಪಾರು ನೊಟೀಸ್ ನೀಡಲಾಗುವುದು ಎಂದರು.

ಇತ್ತೀಚಿನ ಸುದ್ದಿ