ದಾರಿಯುದ್ದಕ್ಕೂ ಟಿಕೆಟ್ ಆಕಾಂಕ್ಷಿಗಳ ಬ್ಯಾನರೋ, ಬ್ಯಾನರು!: ಶುರುವಾಯ್ತು ಟಿಕೆಟ್ ಆಕಾಂಕ್ಷಿಗಳ ನಾನಾ ಕಸರತ್ತು!

ಚಿಕ್ಕಮಗಳೂರು: ಮೂಡಿಗೆರೆ ಮೀಸಲು ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್ ಆಕಾಂಕ್ಷಿಗಳ ಬ್ಯಾನರ್ ಭರಾಟೆಗೆ ಸಾರ್ವಜನಿಕರು ಕಂಗಾಲಾಗಿದ್ದು, ಕ್ಷೇತ್ರದ ದಾರಿಯುದ್ಧಕ್ಕೂ ಕಟೌಟ್ ಗಳು ರಾರಾಜಿಸುತ್ತಿವೆ.
ಜನರಿಗೆ ವಿವಿಧ ನೆಪಗಳನ್ನು ಮುಂದಿಟ್ಟುಕೊಂಡು ಶುಭಾಶಯ ಕೋರುವ ಬ್ಯಾನರ್ ಗಳು ಅಲ್ಲಲ್ಲಿ ಕಂಡು ಬರುತ್ತಿವೆ. ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಟಿಕೆಟ್ ಆಕಾಂಕ್ಷಿಗಳು ಬ್ಯಾನರ್ ಮೂಲಕ ಸಾರ್ವಜನಿಕರನ್ನು ಸೆಳೆಯಲು ಮುಂದಾಗಿದ್ದಾರೆ.
ಮೂಡಿಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯಲ್ಲಿ ಹಾಲಿ ಶಾಸಕರು ಇದ್ದರೂ ಕೂಡ, ಇಲ್ಲಿ ಐವರು ಟಿಕೆಟ್ ಗಾಗಿ ಲಾಬಿ ನಡೆಸುತ್ತಿದ್ದಾರೆ. ಕಾಂಗ್ರೆಸ್, ಜೆಡಿಎಸ್ ನಲ್ಲಿ ಕೂಡ ಇದೇ ಪರಿಸ್ಥಿತಿ ಕಂಡು ಬಂದಿದೆ. ಚಿಕ್ಕಮಗಳೂರು ಜಿಲ್ಲಾಧಿಕಾರಿಯಾಗಿ ನಿವೃತ್ತ ಹೊಂದಿರುವ ಶ್ರೀರಂಗಯ್ಯ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ.
ಒಟ್ಟಿನಲ್ಲಿ ಚುನಾವಣೆ ಸಮೀಪಿಸುತ್ತಿದ್ದಂತೆಯೇ ವಿವಿಧ ಪಕ್ಷಗಳ ನಾಯಕರು ಚಟುವಟಿಕೆ ಆರಂಭಿಸಿದ್ದು, ಮತದಾರರನ್ನು ಸೆಳೆಯಲು ನಾನಾ ಕಸರತು ನಡೆಸುತ್ತಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LG00SlXNdBFJ1LFb3E40gL
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw