ಚಪ್ಪಲಿಯಲ್ಲಿ ಹೊಡೆದರು, ಹುಚ್ಚು ನಾಯಿಯಂತೆ ಅಟ್ಟಾಡಿಸಿದರು: ದಾಳಿಯನ್ನು ವಿವರಿಸಿದ ಶಾಸಕ ಎಂ.ಪಿ.ಕುಮಾರಸ್ವಾಮಿ - Mahanayaka
9:17 AM Saturday 14 - December 2024

ಚಪ್ಪಲಿಯಲ್ಲಿ ಹೊಡೆದರು, ಹುಚ್ಚು ನಾಯಿಯಂತೆ ಅಟ್ಟಾಡಿಸಿದರು: ದಾಳಿಯನ್ನು ವಿವರಿಸಿದ ಶಾಸಕ ಎಂ.ಪಿ.ಕುಮಾರಸ್ವಾಮಿ

mp kumaraswamy
21/11/2022

ಕೊಟ್ಟಿಗೆಹಾರ: ನನಗೆ ಚಪ್ಪಲಿಯಲ್ಲಿ ಹೊಡೆದರು, ಎಲ್ಲರ ಕೈಗಳಲ್ಲಿಯೂ ದೊಣ್ಣೆ ಇತ್ತು, ಕಳ್ಳ ಹುಚ್ಚು ನಾಯಿಯ ರೀತಿ ನನ್ನನ್ನು ಅಟ್ಟಾಡಿಸಿದರು ಎಂದು ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ಹೇಳಿದರು.

ತಮ್ಮ ಮೇಲಿನ ದಾಳಿಯ ಕುರಿತು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು,  ನಾನೇ ಓಡಿ ಬಂದು ಕಾರಲ್ಲಿ ಕೂತೆ, ಜೀಪಿನ ಮೇಲೆ ತುಂಬಾ ಕಲ್ಲು ಹೊಡೆದರು, ಇದು ಆನೆ ಪ್ರಕರಣ ಅಲ್ಲ, ರಾಜಕೀಯ ದಾಳಿ ಎಂದರು.

ನಾನು ಬನಿಯನ್ ಧರಿಸಿದ್ದರಿಂದಾಗಿ ಬಟ್ಟೆ ಹರಿದದ್ದು ಕಾಣುತ್ತಿರಲಿಲ್ಲ, ಬನಿಯನ್ ತೆಗೆದರೆ ಹರಿದದ್ದು ಕಾಣುತ್ತದೆ.  ಬಟ್ಟೆ ಬೇಕಾದ್ರೆ  ನೂರು ತರ್ತೀನಿ, ಕಣ್ಣು, ಕೈ-ಕಾಲು ಹೋಗಿದ್ರೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.

ಬರೀ ನನಗೆ ಮಾತ್ರವಲ್ಲ, ಪೊಲೀಸರಿಗೂ ಹೊಡೆದಿದ್ದಾರೆ, ರಾಜಕೀಯವಾಗಿ ಚುನಾವಣೆಗೆ ನಿಲ್ಲಬಾರದು ಅಂತ ವ್ಯವಸ್ಥಿತ ಹಲ್ಲೆ ನಡೆಸಲಾಗಿದೆ. ಚುನಾವಣೆಗೆ ನಿಲ್ಲಲೇಬಾರದು ಎಂದು ಸಂಚು ಮಾಡಿ ಹಲ್ಲೆ ಮಾಡಿದ್ದಾರೆ. ನಾನು ಒಂದೇ ಒಂದು ಮಾತನಾಡಿಲ್ಲ, ಬಹಳ ಸಂಚು ಮಾಡಿ ಹಲ್ಲೆ ಮಾಡಿದ್ದಾರೆ ಎಂದು ಕುಮಾರಸ್ವಾಮಿ ಆರೋಪಿಸಿದರು.

ನನ್ನ ಮೂಲಕ ಎಲ್ಲಾ ಶಾಸಕರಿಗೂ ಸರ್ಕಾರ ಭದ್ರತೆ ನೀಡಬೇಕು. ನಾನು ಕಾಡು ಕಾಯಲ್ಲ, ಆನೆ ಸಾಕಿಲ್ಲ, ಸರ್ಕಾರಕ್ಕೆ ದೂರು ನೀಡಬಹುದು, ನೀಡುತ್ತೇನೆ. ನಾನು ಕೋರ್ಟ್ ಅಲ್ಲ, ಕ್ಷೇತ್ರಕ್ಕೆ ಸಾಕಷ್ಟು ಹಣ ತಂದಿದ್ದೇನೆ,  ಇಂದು ಹೋಗಿ ಎಲ್ಲರಿಗೂ ಸಾಂತ್ವನ ಹೇಳಿದ್ದೇನೆ. ಆನೆ ಸ್ಥಳಾಂತಕ್ಕೆ ನಾಳೆಯೇ ಕ್ರಮ ಕೈಗೊಳ್ಳುತ್ತೇವೆ ಎಂದರು.

ಬೆಂಗಳೂರಿಗೆ ಹೋಗುತ್ತೇನೆ ಈ ಬಗ್ಗೆ ವರಿಷ್ಟರು, ಸಿಎಂ, ಗೃಹ ಮಂತ್ರಿ ಗಮನಕ್ಕೆ ತರುತ್ತೇನೆ ಎಂದು ಕುಮಾಸ್ವಾಮಿ ಇದೇ ವೇಳೆ ತಿಳಿಸಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ