ದಲಿತ ಯುವಕನಿಗೆ ಹಲ್ಲೆ ನಡೆಸಿ ಮೂತ್ರ ಕುಡಿಸಿದ ಪ್ರಕರಣ | ಜೆಡಿಎಸ್ ಹೇಳಿದ್ದೇನು ಗೊತ್ತಾ? - Mahanayaka

ದಲಿತ ಯುವಕನಿಗೆ ಹಲ್ಲೆ ನಡೆಸಿ ಮೂತ್ರ ಕುಡಿಸಿದ ಪ್ರಕರಣ | ಜೆಡಿಎಸ್ ಹೇಳಿದ್ದೇನು ಗೊತ್ತಾ?

h k kumaraswamy
25/05/2021

ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕಿರಗುಂದ ಗ್ರಾಮದ ಪುನೀತ್ ಎಂಬ ಯುವಕನ ಮೇಲೆ ಹಲ್ಲೆ ನಡೆಸಿ ಮೂತ್ರ ಕುಡಿಸಿದ ಆರೋಪಿ ಅಧಿಕಾರಿಯನ್ನು ಬಂಧಿಸಬೇಕು ಎಂದು ಜೆಡಿಎಸ್, ರಾಜ್ಯ ಸರ್ಕಾರವನ್ನು ಒತ್ತಾಯಿಸಿದೆ.

ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಕೆ. ಕುಮಾರಸ್ವಾಮಿ , ಈ ಬಗ್ಗೆ ಪ್ರಕಟಣೆ ಹೊರಡಿಸಿದ್ದು,  ಕಾನೂನು ಪಾಲನೆ ಮಾಡಬೇಕಾದವರೇ ಈ ರೀತಿಯಾಗಿ ವರ್ತಿಸಿರುವುದು ಅತ್ಯಂತ ಹೇಯ ಕೃತ್ಯ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದಲಿತರ ಮೇಲಿನ ದೌರ್ಜನ್ಯಗಳು ರಾಜ್ಯದಲ್ಲಿ ಏರಿಕೆಯಾಗುತ್ತಿದೆ. ಆದರೆ ಕ್ರಮಕೈಗೊಳ್ಳಲು ಸರ್ಕಾರ ವಿಫಲವಾಗಿದೆ. ದೌರ್ಜನ್ಯ ಪ್ರಕರಣಗಳಿಗೆ ಸಂಬಂಧಿಸಿದಂತೆ  ಸರ್ಕಾರ ಸೂಕ್ತ ಕಾನೂನು ಕ್ರಮವನ್ನು ಜರಗಿಸಬೇಕು ಎಂದು ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ