ಹೆಚ್ಚಿನ ಚಿಕಿತ್ಸೆಗಾಗಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಶಾರೀಕ್ ಬೆಂಗಳೂರಿಗೆ!
ಮಂಗಳೂರು ನಗರದ ಪಂಪ್ ವೆಲ್ ಸಮೀಪದ ನಾಗುರಿಯಲ್ಲಿ ಆಟೋ ರಿಕ್ಷಾದಲ್ಲಿ ಸಂಭವಿಸಿದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಮುಹಮ್ಮದ್ ಶಾರಿಕ್ ನನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆದೊಯ್ಯಲಾಗಿದೆ.
ನವೆಂಬರ್ 19ರಂದು ಸಂಭವಿಸಿದ ಕುಕ್ಕರ್ ಬಾಂಬ್ ಸ್ಫೋಟದಲ್ಲಿ ಆರೋಪಿ ಶಾರಿಕ್ ತೀವ್ರವಾಗಿ ಗಾಯಗೊಂಡಿದ್ದು, ಆತನನ್ನು ಮಂಗಳೂರು ನಗರದ ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಪೊಲೀಸ್ ನಿಗಾದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆತನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದರು.
ಈ ನಡುವೆ ಆಸ್ಪತ್ರೆಯ ವೈದ್ಯರ ಶಿಫಾರಸಿನಂತೆ ಹೆಚ್ಚಿನ ಚಿಕಿತ್ಸೆಗಾಗಿ ಆತನನ್ನು ಶನಿವಾರ ಬೆಳಗ್ಗೆ 6 ಗಂಟೆಗೆ ಬೆಂಗಳೂರಿಗೆ ಕರೆದೊಯ್ಯಲಾಗಿದೆ’ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw