ಕುಮಾರಸ್ವಾಮಿ ಪರ ಸುಮಲತಾ ಪ್ರಚಾರಕ್ಕೆ ಮುಹೂರ್ತ ಫಿಕ್ಸ್!

ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಹೆಚ್.ಡಿ.ಕುಮಾರಸ್ವಾಮಿ ಅವರ ಪರ ಪ್ರಚಾರಕ್ಕೆ ಮಂಡ್ಯ ಸಂಸದೆ ಸುಮಲತಾ ಕೊನೆಯ ಕ್ಷಣಗಳಲ್ಲಿ ಕಣಕ್ಕಿಳಿದಿದ್ದು, ನಾಳೆ ಸುಮಲತಾ ಪ್ರಚಾರಕ್ಕಿಳಿಯಲಿದ್ದಾರೆ ಎನ್ನಲಾಗಿದೆ.
ಮತದಾನಕ್ಕೆ ಇನ್ನು ಕೇವಲ 2 ದಿನಗಳು ಇರುವ ನಡುವೆ ಸುಮಲತಾ ಪ್ರಚಾರ ನಡೆಸಲಿದ್ದಾರೆ ಎನ್ನಲಾಗುತ್ತಿದೆ. ಅತ್ತ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರ ನಟ ದರ್ಶನ್ ಭರ್ಜರಿ ಪ್ರಚಾರ ನಡೆಸುತ್ತಿದ್ದರೆ, ಇತ್ತ ಸುಮಲತಾ ನಾಳೆ ಪ್ರಚಾರ ಶಾಸ್ತ್ರ ಮುಗಿಸಲಿದ್ದಾರೆನ್ನಲಾಗುತ್ತಿದೆ.
ಇನ್ನು, ಸುಮಲತಾ ಅವರು ಮಂಡ್ಯದಲ್ಲಿ ಪ್ರಚಾರ ಕೈಗೊಳ್ಳುವ ಕುರಿತಂತೆ ಪ್ರತಿಕ್ರಿಯೆ ನೀಡಿದ್ದ ಜೆಡಿಎಸ್ ಅಭ್ಯರ್ಥಿ ಎಚ್ಡಿ ಕುಮಾರಸ್ವಾಮಿ ಅವರು, ಸುಮಲತಾ ಅವರು ಈಗ ಬಿಜೆಪಿ ಪಕ್ಷ ಸೇರಿದ್ದಾರೆ. ಅವರು ಪಕ್ಷ ಹೇಳಿದ ಕಡೆಗಳಲ್ಲಿ ಪ್ರಚಾರ ಮಾಡುತ್ತಿದ್ದಾರೆ. ಇನ್ನೂ ಮೂರು ದಿನಗಳ ಕಾಲ ಇದೆ, ನೋಡೋಣ. ನಮ್ಮಲ್ಲೂ ಬಂದು ಅವರು ಪ್ರಚಾರ ಮಾಡಬಹುದು ಎಂದು ಹೇಳಿದ್ದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth