3:20 AM Tuesday 18 - November 2025

ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಮುಲ್ಲೈ ಮುಗಿಲನ್ ಇಂದು ಬೆಳಗ್ಗೆ ಅಧಿಕಾರ ಸ್ವೀಕಾರ

Mullai Mugilan
17/06/2023

ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಮುಲ್ಲೈ ಮುಗಿಲನ್ ಇಂದು ಬೆಳಗ್ಗೆ ಅಧಿಕಾರ ಸ್ವೀಕರಿಸಿದರು. ನಿರ್ಗಮನ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ನೂತನ ಜಿಲ್ಲಾಧಿಕಾರಿಗೆ ಅಧಿಕಾರ ಹಸ್ತಾಂತರಿಸಿದರು.

ಮೂಲತಃ ತಮಿಳುನಾಡಿನ ಮುಲ್ಲೈ ಮುಗಿಲನ್ 2013ರ ಐಎಎಸ್ ಬ್ಯಾಚ್‌ನವರಾಗಿದ್ದು, ದಿಂಡಿಗಲ್ ಅಣ್ಣಾ ವಿವಿಯ ಪಿಎಸ್‌ಎನ್‌ಎ ಕಾಲೇಜ್ ಆಫ್ ಇಂಜಿನಿಯರಿಂಗ್ ಮತ್ತು ಟೆಕ್ನಾಲಜಿನಲ್ಲಿ ಓದಿ ಕಂಪ್ಯೂಟರ್ ಸಯನ್ಸ್‌ನಲ್ಲಿ ಪದವಿ ಪಡೆದಿದ್ದಾರೆ.

ಪ್ರಸಕ್ತ ಸೆಂಟರ್ ಫಾರ್ ಸ್ಮಾರ್ಟ್ ಗವರ್ನೆನ್ಸ್ ಬೆಂಗಳೂರು ಇದರ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿರುವ ಮುಗಿಲನ್, ಅದಕ್ಕೂ ಮುನ್ನ ಬಾಗಲಕೋಟೆ ಜಮಖಂಡಿ ಉಪವಿಭಾಗ ಅಧಿಕಾರಿ, ಬೆಳಗಾವಿ ಸ್ಮಾರ್ಟ್ ಸಿಟಿ ಲಿಮಿಟೆಡ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಉತ್ತರ ಕನ್ನಡ ಜಿಲ್ಲೆಯ ಉಪ ವಿಭಾಗ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version