ಪ್ರವಾಸಿಗರೇ ಗಮನಿಸಿ: ಮುಳ್ಳಯ್ಯನಗಿರಿ ತಪ್ಪಲು 4 ದಿನ ಬಂದ್!
ಚಿಕ್ಕಮಗಳೂರು: ದತ್ತಪೀಠದಲ್ಲಿ ದತ್ತಜಯಂತಿ ಹಿನ್ನೆಲೆ, 4 ದಿನ ಮುಳ್ಳಯ್ಯನಗಿರಿ ಭಾಗಕ್ಕೆ ಟೂರಿಸ್ಟ್ ಬ್ಯಾನ್ ಮಾಡಲಾಗಿದ್ದು, ಡಿಸೆಂಬರ್ 11ರಿಂದ 14 ವರೆಗೆ ನಾಲ್ಕು ದಿನ ಪಶ್ಚಿಮ ಘಟ್ಟಗಳ ಸಾಲು ಬಂದ್ ಆಗಲಿದೆ.
4 ದಿನ ಪ್ರವಾಸಿಗರಿಗೆ ನಿರ್ಬಂಧ ಹೇರಿ ಜಿಲ್ಲಾಡಳಿತ ಆದೇಶ ನೀಡಿದೆ. ಮುಳ್ಳಯ್ಯನಗಿರಿ, ದತ್ತಪೀಠ, ಮಾಣಿಕ್ಯಧಾರಕ್ಕೆ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ. ಡಿಸೆಂಬರ್ 12—13–14 ರಂದು ದತ್ತಪೀಠದಲ್ಲಿ ದತ್ತಜಯಂತಿ ಸಂಭ್ರಮ ನಡೆಯಲಿದೆ.
ವಿಶ್ವಹಿಂದೂ ಪರಿಷದ್, ಬಜರಂಗದಳದ ನೇತೃತ್ವದಲ್ಲಿ ದತ್ತಜಯಂತಿ ನಡೆಯಲಿದೆ ಹೀಗಾಗಿ ಪ್ರವಾಸಿಗರಿಗೆ ನಿರ್ಬಂಧ ಹೇರಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.
ಡಿಸೆಂಬರ್ 15 ಬೆಳಗ್ಗೆ 10 ಗಂಟೆ ಬಳಿಕ ಚಿಕ್ಕಮಗಳೂರು ತಾಲೂಕಿನ ಪಶ್ಚಿಮಘಟ್ಟಗಳ ಸಾಲು ಮುಳ್ಳಯ್ಯನಗಿರಿ, ದತ್ತಪೀಠ ಭಾಗ ಪ್ರವಾಸಿಗರಿಗೆ ಮುಕ್ತವಾಗಲಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: