ಬಾಲಿವುಡ್ ನಟ ಸಲ್ಮಾನ್ ಖಾನ್ ಆಯ್ತು, ಇದೀಗ ಶಾರೂಖ್ ಖಾನ್ ಗೆ ಜೀವ ಬೆದರಿಕೆ: ಮುಂಬೈ ಪೊಲೀಸರಿಂದ ತೀವ್ರ ತನಿಖೆ

07/11/2024

ಬಾಲಿವುಡ್ ಸೂಪರ್ ಸ್ಟಾರ್ ಶಾರೂಖ್ ಖಾನ್ ಅವರಿಗೆ ಕೊಲೆ ಬೆದರಿಕೆ ಹಾಕಲಾಗಿದೆ. ಹೀಗಾಗಿ ಈ ಪ್ರಕರಣದ ತನಿಖೆಯ ಭಾಗವಾಗಿ ಮುಂಬೈ ಪೊಲೀಸ್ ಅಧಿಕಾರಿಗಳ ತಂಡ ಗುರುವಾರ ಛತ್ತೀಸ್ ಗಢದ ರಾಯ್ಪುರಕ್ಕೆ ಆಗಮಿಸಿದೆ ಎಂದು ಸುದ್ದಿ ಸಂಸ್ಥೆ ಐಎಎನ್ಎಸ್ ವರದಿ ಮಾಡಿದೆ.

ಫೋನ್ ಕರೆ ಮೂಲಕ ಬೆದರಿಕೆ ಬಂದಿದೆ. ಅಪರಿಚಿತ ವ್ಯಕ್ತಿ ಪೊಲೀಸ್ ಠಾಣೆಯನ್ನು ಸಂಪರ್ಕಿಸಿ ಕರೆ ಮಾಡಿದ್ದಾನೆ. ಈ ಮೂಲದ ಮುಖೇನ ಪೊಲೀಸ್ ಅಧಿಕಾರಿಗಳು ಕರೆ ಮೂಲವನ್ನು ರಾಯ್ಪುರದಲ್ಲಿ ಪತ್ತೆಹಚ್ಚಿದ್ದಾರೆ. ಈ ಕುರಿತು ಮುಂಬೈನ ಬಾಂದ್ರಾ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ತನಿಖೆಯನ್ನು ಮುಂದುವರಿಸಲು ತಂಡವನ್ನು ರಾಯ್ಪುರಕ್ಕೆ ಕರೆದೊಯ್ಯಲಾಗಿದೆ.

ಭಾರತೀಯ ನ್ಯಾಯ ಸಂಹಿತಾ (ಬಿಎನ್ಎಸ್) ಸೆಕ್ಷನ್ 308 (4) ಮತ್ತು 351 (3) (4) ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂಬೈ ಪೊಲೀಸರು ಸೈಬರ್ ಪೊಲೀಸ್ ಠಾಣೆಯೊಂದಿಗೆ ಸಂಪರ್ಕದಲ್ಲಿದ್ದಾರೆ ಮತ್ತು ಛತ್ತೀಸ್ ಗಢ ಪೊಲೀಸರ ಸಹಾಯವನ್ನು ಕೋರಿದ್ದಾರೆ. ಹೈ ಪ್ರೊಫೈಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಛತ್ತೀಸ್ ಗಢ ಅಧಿಕಾರಿಗಳು ಇನ್ನೂ ಯಾವುದೇ ಸಾರ್ವಜನಿಕ ಹೇಳಿಕೆಗಳನ್ನು ನೀಡಿಲ್ಲ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ

Exit mobile version