ಭೀಕರ ರಸ್ತೆ ಅಪಘಾತ: ಮೂವರು ಸಾವು, 8 ಮಂದಿಗೆ ಗಂಭೀರ ಗಾಯ

10/05/2024
ಮುಂಬೈ: ಭೀಕರ ಅಪಘಾತವೊಂದರಲ್ಲಿ ಮೂವರು ಮೃತಪಟ್ಟು 8 ಮಂದಿ ಗಾಯಗೊಂಡ ಆತಂಕಾರಿ ಘಟನೆ ಮುಂಬೈ-ಪುಣೆ ಎಕ್ಸ್ ಪ್ರೆಸ್ ವೇನಲ್ಲಿ ನಡೆದಿದೆ.
ಟ್ರಕ್ ಹಾಗೂ ಇತರ ಎರಡು ವಾಹನಗಳ ನಡುವೆ ಈ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಮೂವರು ಮೃತಪಟ್ಟು, ಎಂಟು ಮಂದಿ ಗಂಭೀರವಾಗಿ ಗಾಯಗೊಂಡಿರುವ ದುರ್ಘಟನೆ ಶುಕ್ರವಾರ ಬೆಳಿಗ್ಗೆ ಸಂಭವಿಸಿದೆ.
ಭೊರ್ ಘಾಟ್ ಸಮೀಪ ಚಲಿಸುತ್ತಿದ್ದ ಟ್ರಕ್, ಬ್ರೇಕ್ ವೈಫಲ್ಯದಿಂದ ಚಾಲಕನ ನಿಯಂತ್ರಣ ಕಳೆದುಕೊಂಡು ಎರಡು ವಾಹನಗಳಿಗೆ ಗುದ್ದಿದೆ ಎಂದು ಎಎನ್ ಐ ಟ್ವೀಟ್ ಮಾಡಿದೆ. ಗಾಯಗೊಂಡವರನ್ನು ತಕ್ಷಣವೇ ಖೋಪೊಲಿ ನಗರದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/JItjEWZ9e5fBWDL6CkTr97