ಮುಂದಿನ 2 ದಿನಗಳಲ್ಲಿ ಈ 6 ಜಿಲ್ಲೆಗಳಲ್ಲಿ ಮಳೆಯಾಗಲಿದೆ
31/03/2021
ಬೆಂಗಳೂರು: ಮುಂದಿನ 48 ಗಂಟೆಗಳಲ್ಲಿ ಅಂದರೆ 2 ದಿನಗಳ ಕಾಲ ರಾಜ್ಯದ 6 ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸೋಮವಾರ, ಮಂಗಳವಾರವೂ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಿತ್ತು. ಇದರ ಬೆನ್ನಲ್ಲೇ ಹವಾಮಾನ ಇಲಾಖೆ ಮತ್ತೆ ಮಳೆಯ ಮುನ್ಸೂಚನೆಯನ್ನು ನೀಡಿದೆ.
ಉಡುಪಿ, ಚಾಮರಾಜನಗರ, ದಕ್ಷಿಣ ಕನ್ನಡ, ಕೊಡಗು, ಮಂಡ್ಯ ಹಾಗೂ ಮೈಸೂರು ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅಕಾಲಿಕ ಮಳೆಯಿಂದಾಗಿ ರೈತರು ಸಂಕಷ್ಟದಲ್ಲಿದ್ದಾರೆ. ಸರ್ಕಾರ ಸಿಡಿ ಪ್ರಕರಣದಲ್ಲೇ ಬಿಝಿಯಾಗಿದೆ. ಜನರ ಕಡೆಗೆ ಸ್ವಲ್ಪ ಗಮನ ನೀಡಬೇಕು. ಅಕಾಲಿಕ ಮಳೆಯಿಂದಾಗಿ ರಬ್ಬರ್, ಅಡಿಕೆ, ಗೇರುಬೀಜ ಸೇರಿದಂತೆ ವಿವಿಧ ಬೆಳೆಗಾರರಿಗೆ ರಾಜ್ಯದಲ್ಲಿ ತೊಂದರೆಯುಂಟಾಗುತ್ತಿದೆ. ಈ ಬಗ್ಗೆ ಸರ್ಕಾರ ಗಮನಿಸಬೇಕು ಎನ್ನುವ ಒತ್ತಾಯ ಕೇಳಿ ಬಂದಿದೆ.