ಕಾಂಗ್ರೆಸ್ ನಾಯಕರ ಮೇಲೆ ಮುನಿದ ಪರಮೇಶ್ವರ: ಬಿ.ಕೆ.ಹರಿಪ್ರಸಾದ್ ನೀಡಿದ ಸ್ಪಷ್ಟನೆ ಏನು? - Mahanayaka

ಕಾಂಗ್ರೆಸ್ ನಾಯಕರ ಮೇಲೆ ಮುನಿದ ಪರಮೇಶ್ವರ: ಬಿ.ಕೆ.ಹರಿಪ್ರಸಾದ್ ನೀಡಿದ ಸ್ಪಷ್ಟನೆ ಏನು?

parameshwar bk hariprasad
03/02/2023

ಉಡುಪಿ: ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಹಾಗೂ ನನ್ನ ಮಧ್ಯೆ ಯಾವುದೇ ಮುನಿಸಿಲ್ಲ.  ಅದು ಕೇವಲ ಮಾಧ್ಯಮದ ಸೃಷ್ಟಿ. ಕಾಂಗ್ರೆಸ್ ಪಕ್ಷದಲ್ಲಿ ಯಾರಿಗೂ ಭಿನ್ನಾಭಿಪ್ರಾಯಗಳಿಲ್ಲ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್ ಹೇಳಿದರು.

ಉಡುಪಿಯಲ್ಲಿಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಪರಮೇಶ್ವರ್ ಚುನಾವಣಾ ಪ್ರಣಾಳಿಕೆಯ ಸಮಿತಿಯ ಅಧ್ಯಕ್ಷರು. ಚುನಾವಣಾ ಪ್ರಣಾಳಿಕೆಯ ವಿಚಾರವಾಗಿ ಅವರೊಂದಿಗೆ ಕೆಲವೊಂದು ಚರ್ಚೆ ಮಾಡಬೇಕಾಗಿತ್ತು. ಅದಕ್ಕೆ ಡಿಕೆಶಿ ಅವರು ಹೋಗಿದ್ದರು. ಪ್ರಣಾಳಿಕೆ ಸಮಿತಿಗೆ ರಾಜೀನಾಮೆ ಕೊಡುತ್ತಾರೆಂಬುವುದೆಲ್ಲ ಮಾಧ್ಯಮದ ಸೃಷ್ಟಿ ಎಂದರು.

ಕುದುರೆ ವ್ಯಾಪಾರದ ಕುರಿತು ಮಾತನಾಡಿದ ಅವರು, ಅದು ಅತಂತ್ರ ಸರಕಾರ ಇದ್ದಾಗ ಮಾತ್ರ ಕುದುರೆ ವ್ಯಾಪಾರಕ್ಕೆ ಅವಕಾಶ. ಯಾವುದೇ ಕಾರಣಕ್ಕೂ ಅತಂತ್ರ ಸರಕಾರ ಬರುವುದಿಲ್ಲ. ಜನರಿಗೆ ನೋವಾಗಿದೆ, ಸ್ಪಷ್ಟವಾದ ಬಹುಮತ ಬರಲಿದೆ ಎಂದು ಹೇಳಿದರು.

ಅಭ್ಯರ್ಥಿಗಳ ಪಟ್ಟಿಗಳು ಈಗಾಗಲೇ ನಿನ್ನೆ ಪ್ರದೇಶ ಕಾಂಗ್ರೆಸ್ ಸಮಿತಿಯಲ್ಲಿ 37 ಜನರ ಸಮ್ಮುಖ ಬಂದಿದೆ. ನಿನ್ನೆ ಸಂಜೆ ನಾಲ್ಕು ಗಂಟೆಯವರೆಗೂ ಸುದೀರ್ಘವಾಗಿ ಚರ್ಚೆ ಮಾಡಲಾಗಿದೆ. ಎಲ್ಲರು ಅನಿಸಿಕೆ, ಶಿಫಾರಸುಗಳನ್ನು ಕೊಟ್ಟಿದ್ದಾರೆ, ಮುಂದಿನ ಹಂತದಲ್ಲಿ ಸ್ಕ್ರೀನಿಂಗ್ ಕಮಿಟಿ ಮುಂದೆ ಹೋಗಲಿದೆ. ಸ್ಕ್ರೀನಿಂಗ್ ಕಮಿಟಿ ಆಯ್ಕೆಯಾಗಬೇಕು. ಅದರಲ್ಲಿ ಮೂರು ಜನ ಎಐಸಿಸಿ ಅವರು ಇರುತ್ತಾರೆ. ಸ್ಕ್ರೀನಿಂಗ್ ಕಮಿಟಿ ಫೈನಲ್ ಮಾಡಿ  ಆಮೇಲೆ ಸೆಂಟ್ರಲ್ ಎಲೆಕ್ಷನ್ ಕಮಿಟಿಗೆ ಹೋಗುತ್ತದೆ. ಪ್ರಾಥಮಿಕ ಹಂತದ ಪ್ರಕ್ರಿಯೆ ಮುಗಿದಿದ್ದು, ನಿನ್ನೆ ಪ್ರದೇಶ್  ಎಲೆಕ್ಷನ್ ಕಮಿಟಿ ಜವಾಬ್ದಾರಿ ಮುಕ್ತಾಯವಾಗಿದೆ. ಫೆಬ್ರವರಿ ತಿಂಗಳ ಕೊನೆಯೊಳಗೆ ಅಭ್ಯರ್ಥಿಗಳ ಘೋಷಣೆ ಸಾಧ್ಯತೆ ಇದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು, ಮಾಜಿ ಸಚಿವ ಆರ್ .ವಿ . ದೇಶ್ ಪಾಂಡೆ, ವಿಧಾನಪರಿಷತ್ ಸದಸ್ಯ ಮಂಜುನಾಥ ಭಂಡಾರಿˌ ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ, ಮಾಜಿ ಶಾಸಕರಾದ ಶ್ರೀ ಗೋಪಾಲ ಪೂಜಾರಿ, KPCC  ಪ್ರ .ಕಾರ್ಯದರ್ಶಿಗಳಾದ ಶ್ರೀ ˌಮೋಹನ್, ಮಂಗಳೂರು  ಮಹಾ ನಗರಪಾಲಿಕೆ ಸದಸ್ಯರಾದ  ನವೀನ್  ಡಿ” ಸೋಜ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ .ದೀಪಕ್  ಕೋಟ್ಯಾನ್, ಜಿಲ್ಲಾ ವಕ್ತಾರ ಭಾಸ್ಕರ ರಾವ್ ಕಿದಿಯೂರು ˌ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ  ಬಿ. ನರಸಿಂಹಮೂರ್ತಿ ಹಾಗೂ ಬಿ. ಕುಶಲ್ ಶೆಟ್ಟಿ  ಉಪಸ್ಥಿತರಿದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

Disclaimer:

www.mahanayaka.in ಅಂತರ್ಜಾಲ ಮಾಧ್ಯಮದಲ್ಲಿ ಪ್ರಕಟವಾದ ಸುದ್ದಿಗಳಲ್ಲಿ ಯಾರದ್ದೇ ಭಾವನೆಗಳಿಗೆ ಧಕ್ಕೆಯಾಗುವಂತಹ ಅಥವಾ ನೋವುಂಟಾಗುವಂತಹ ಅಥವಾ ನಿಮಗೆ ಆಕ್ಷೇಪಾರ್ಹ ಎನಿಸಿದಂತಹ ಅಂಶಗಳ ಬಗ್ಗೆ ಓದುಗರು 9686872149 ನಂಬರ್ ಗೆ ಸುದ್ದಿಯ ಲಿಂಕ್ ಸಹಿತ ನಿಮ್ಮ ದೂರು ಸಲಹೆಗಳನ್ನು ವಾಟ್ಸಾಪ್ ಮಾಡಬಹುದು. ಅಥವಾ ಕರೆ ಮಾಡಬಹುದು. ನಿಮ್ಮ ದೂರನ್ನು ಪರಿಶೀಲಿಸಿ, ಅಂತಹ ಆಕ್ಷೇಪಾರ್ಹ ಅಂಶಗಳನ್ನು ತೆಗೆದು ಹಾಕಲು ಮಾಧ್ಯಮವು ಬದ್ಧವಾಗಿದೆ.

ಇತ್ತೀಚಿನ ಸುದ್ದಿ