ಆರ್.ಆರ್.ನಗರ ಕ್ಷೇತ್ರದಲ್ಲಿ ಮುನಿರತ್ನಗೆ ಭರ್ಜರಿ ಗೆಲುವು
ಬೆಂಗಳೂರು: ಆರ್.ಆರ್.ನಗರ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಭರ್ಜರಿ ಜಯಗಳಿಸಿದ್ದು, ಈ ಮೂಲಕ ಇದೇ ಕ್ಷೇತ್ರದಲ್ಲಿ ಅವರು ಮೂರನೇ ಬಾರಿಗೆ ಗೆಲುವು ಸಾಧಿಸಿದ್ದಾರೆ.
25 ಸುತ್ತುಗಳಲ್ಲಿ ಮತ ಎಣಿಕೆ ನಡೆಯಿತು. ಮುನಿರತ್ನ ಅವರು ತಮ್ಮ ಪ್ರತಿಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಅವರನ್ನು 57,936 ಮತಗಳ ಅಂತರದಲ್ಲಿ ಸೋಲಿಸಿದರು. ಮುನಿರತ್ನ ಒಟ್ಟು 1,25,734 ಮತಗಳನ್ನು ಪಡೆದರೆ, ಕುಸುಮಾ ಅವರು 67,798 ಮತಗಳನ್ನು ಪಡೆದುಕೊಂಡಿದ್ದಾರೆ.
2019ರ ಜುಲೈನಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಗೊಂಡಿದ್ದ ಮುನಿರತ್ನ ಅವರು ಇದೀಗ ಬಿಜೆಪಿಯಿಂದ ಇದೇ ಕ್ಷೇತ್ರದಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಕಾಂಗ್ರೆಸ್ ನ ಭದ್ರಕೋಟೆಯಾಗಿದ್ದ ಆರ್.ಆರ್.ನಗರದಲ್ಲಿ ಬಿಜೆಪಿ ವಿಜಯಪತಾಕೆ ಹಾರಿಸಿದೆ.
Disclaimer:
www.mahanayaka.in ಅಂತರ್ಜಾಲ ಮಾಧ್ಯಮದಲ್ಲಿ ಪ್ರಕಟವಾದ ಸುದ್ದಿಗಳಲ್ಲಿ ಯಾರದ್ದೇ ಭಾವನೆಗಳಿಗೆ ಧಕ್ಕೆಯಾಗುವಂತಹ ಅಥವಾ ನೋವುಂಟಾಗುವಂತಹ ಅಥವಾ ನಿಮಗೆ ಆಕ್ಷೇಪಾರ್ಹ ಎನಿಸಿದಂತಹ ಅಂಶಗಳ ಬಗ್ಗೆ ಓದುಗರು 9686872149 ನಂಬರ್ ಗೆ ಸುದ್ದಿಯ ಲಿಂಕ್ ಸಹಿತ ನಿಮ್ಮ ದೂರು ಸಲಹೆಗಳನ್ನು ವಾಟ್ಸಾಪ್ ಮಾಡಬಹುದು. ಅಥವಾ ಕರೆ ಮಾಡಬಹುದು. ನಿಮ್ಮ ದೂರನ್ನು ಪರಿಶೀಲಿಸಿ, ಅಂತಹ ಆಕ್ಷೇಪಾರ್ಹ ಅಂಶಗಳನ್ನು ತೆಗೆದು ಹಾಕಲು ಮಾಧ್ಯಮವು ಬದ್ಧವಾಗಿದೆ.