1:51 AM Wednesday 15 - October 2025

ಆರ್.ಆರ್.ನಗರ ಕ್ಷೇತ್ರದಲ್ಲಿ ಮುನಿರತ್ನಗೆ ಭರ್ಜರಿ ಗೆಲುವು

10/11/2020

ಬೆಂಗಳೂರು: ಆರ್.ಆರ್.ನಗರ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಭರ್ಜರಿ ಜಯಗಳಿಸಿದ್ದು,  ಈ ಮೂಲಕ ಇದೇ ಕ್ಷೇತ್ರದಲ್ಲಿ ಅವರು ಮೂರನೇ ಬಾರಿಗೆ ಗೆಲುವು ಸಾಧಿಸಿದ್ದಾರೆ.

25 ಸುತ್ತುಗಳಲ್ಲಿ ಮತ ಎಣಿಕೆ ನಡೆಯಿತು. ಮುನಿರತ್ನ ಅವರು ತಮ್ಮ ಪ್ರತಿಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಅವರನ್ನು 57,936 ಮತಗಳ ಅಂತರದಲ್ಲಿ ಸೋಲಿಸಿದರು.  ಮುನಿರತ್ನ ಒಟ್ಟು 1,25,734 ಮತಗಳನ್ನು ಪಡೆದರೆ, ಕುಸುಮಾ ಅವರು 67,798 ಮತಗಳನ್ನು ಪಡೆದುಕೊಂಡಿದ್ದಾರೆ.

2019ರ ಜುಲೈನಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಗೊಂಡಿದ್ದ  ಮುನಿರತ್ನ ಅವರು ಇದೀಗ ಬಿಜೆಪಿಯಿಂದ ಇದೇ ಕ್ಷೇತ್ರದಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಕಾಂಗ್ರೆಸ್ ನ ಭದ್ರಕೋಟೆಯಾಗಿದ್ದ ಆರ್.ಆರ್.ನಗರದಲ್ಲಿ ಬಿಜೆಪಿ ವಿಜಯಪತಾಕೆ ಹಾರಿಸಿದೆ.

ಇತ್ತೀಚಿನ ಸುದ್ದಿ

Exit mobile version