ಬೆಂಗಳೂರು: 16 ಬಾರಿ ಇರಿದು ಯುವತಿಯ ಕೊಲೆ-ಆರೋಪಿ ಬಂಧನ - Mahanayaka

ಬೆಂಗಳೂರು: 16 ಬಾರಿ ಇರಿದು ಯುವತಿಯ ಕೊಲೆ–ಆರೋಪಿ ಬಂಧನ

leela pavithra
01/03/2023

ಬೆಂಗಳೂರು: ಜೀವನ್‌ ಬಿಮಾನಗರ ಠಾಣೆ ವ್ಯಾಪ್ತಿಯಲ್ಲಿ ಲೀಲಾ ಪವಿತ್ರಾ (25) ಎಂಬ ಯುವತಿಯನ್ನು ಚಾಕುವಿನಿಂದ 16 ಬಾರಿ ಇರಿದು ಕೊಲೆ ಮಾಡಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ದಿನಕರ್ (28) ಬಂಧಿತ ಆರೋಪಿ. ಆಂಧ್ರಪ್ರದೇಶದ ಲೀಲಾ ಪವಿತ್ರಾ, ಎಂ.ಎಸ್ಸಿ ಪದವೀಧರೆಯಾಗಿದ್ದು, ಮುರುಗೇಶಪಾಳ್ಯದ ಲ್ಯಾಬೋರೇಟರಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಮಂಗಳವಾರ ಸಂಜೆ ಕೆಲಸ ಮುಗಿಸಿ ಕಚೇರಿಯಿಂದ ಹೊರಬಂದಾಗ ಅವರ ಮೇಲೆ ಆರೋಪಿ ದಾಳಿ ಮಾಡಿದ್ದ ಎಂದು ಪೊಲೀಸರು ಹೇಳಿದರು.

ಆರೋಪಿ ದಿನಕರ್, ಆಂಧ್ರಪ್ರದೇಶದವ. ದೊಮ್ಮಲೂರು ಬಳಿಯ ಲ್ಯಾಬೋರೇಟರಿಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಲೀಲಾ ಪವಿತ್ರಾ ಹಾಗೂ ದಿನಕರ್, ಐದು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಮದುವೆಯಾಗಲು ತೀರ್ಮಾನಿಸಿದ್ದರು. ಆದರೆ, ಜಾತಿ ಬೇರೆ ಬೇರೆಯಾಗಿದ್ದರಿಂದ ಮದುವೆಗೆ ಯುವತಿ ಕಡೆಯವರು ಒಪ್ಪಿರಲಿಲ್ಲ. ಮಾತ್ರವಲ್ಲದೇ ದಿನಕರ್ ಜೊತೆ ಮಾತನಾಡದಂತೆ ಪೋಷಕರು ಯುವತಿಗೆ ತಾಕೀತು ಮಾಡಿದ್ದರು.

ಹೀಗಾಗಿ, ಯುವತಿ ಆರೋಪಿಯಿಂದ ಅಂತರ ಕಾಯ್ದುಕೊಳ್ಳಲಾರಂಭಿಸಿದ್ದರು. ಸಿಟ್ಟಾದ ಆರೋಪಿ, ಲೀಲಾ ಪವಿತ್ರಾ ಅವರನ್ನು ಕೊಲೆ ಮಾಡಲು ಸಂಚು ರೂಪಿಸಿದ್ದ.ಚಾಕು ಸಮೇತ ಕಚೇರಿ ಬಳಿ ಬಂದಿದ್ದ. ಲೀಲಾ ಪವಿತ್ರಾ ಅವರು ಕಚೇರಿಯಿಂದ ಹೊರಬರುತ್ತಿದ್ದಂತೆ ಮಾತುಕತೆ ನೆಪದಲ್ಲಿ ಅಡ್ಡಗಟ್ಟಿದ್ದ ಆರೋಪಿ ಹೊಟ್ಟೆ, ಎದೆ, ಕುತ್ತಿಗೆ ಸೇರಿ ದೇಹದ 16 ಕಡೆ ಚಾಕು ಇರಿದಿದ್ದ. ತೀವ್ರ ರಕ್ತಸ್ರಾವದಿಂದ ಯುವತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಹೇಳಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

Disclaimer:

www.mahanayaka.in ಅಂತರ್ಜಾಲ ಮಾಧ್ಯಮದಲ್ಲಿ ಪ್ರಕಟವಾದ ಸುದ್ದಿಗಳಲ್ಲಿ ಯಾರದ್ದೇ ಭಾವನೆಗಳಿಗೆ ಧಕ್ಕೆಯಾಗುವಂತಹ ಅಥವಾ ನೋವುಂಟಾಗುವಂತಹ ಅಥವಾ ನಿಮಗೆ ಆಕ್ಷೇಪಾರ್ಹ ಎನಿಸಿದಂತಹ ಅಂಶಗಳ ಬಗ್ಗೆ ಓದುಗರು 9686872149 ನಂಬರ್ ಗೆ ಸುದ್ದಿಯ ಲಿಂಕ್ ಸಹಿತ ನಿಮ್ಮ ದೂರು ಸಲಹೆಗಳನ್ನು ವಾಟ್ಸಾಪ್ ಮಾಡಬಹುದು. ಅಥವಾ ಕರೆ ಮಾಡಬಹುದು. ನಿಮ್ಮ ದೂರನ್ನು ಪರಿಶೀಲಿಸಿ, ಅಂತಹ ಆಕ್ಷೇಪಾರ್ಹ ಅಂಶಗಳನ್ನು ತೆಗೆದು ಹಾಕಲು ಮಾಧ್ಯಮವು ಬದ್ಧವಾಗಿದೆ.

ಇತ್ತೀಚಿನ ಸುದ್ದಿ