4:48 PM Wednesday 27 - August 2025

ಮುರುಗೇಶ್ ನಿರಾಣಿ ಪುತ್ರ ವಿಜಯ್ ನಿರಾಣಿಗೆ ಸಂಕಷ್ಟ: 6 ಕಾರ್ಮಿಕರ ಸಾವು ಪ್ರಕರಣ ಮತ್ತೆ ತನಿಖೆ ಆರಂಭ

vijay nirani
27/08/2025

ಬೆಂಗಳೂರು: ಮಾಜಿ ಸಚಿವ ಮುರುಗೇಶ್ ನಿರಾಣಿ ಪುತ್ರ ವಿಜಯ್ ನಿರಾಣಿ ವಿರುದ್ಧದ ಶುಗರ್ ಕಾರ್ಖಾನೆ ಸ್ಫೋಟಕ ಪ್ರಕರಣಕ್ಕೆ ಹೊಸ ತಿರುವು ಲಭ್ಯವಾಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ತಳ್ಳಿ ಹಾಕಿದೆ.

2018ರಲ್ಲಿ ಮುಧೋಳದ ಕುಳಲಿ ಗ್ರಾಮದಲ್ಲಿರುವ ನಿರಾಣಿ ಶುಗರ್ಸ್ ನಲ್ಲಿನ ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಸ್ಫೋಟ ಸಂಭವಿಸಿ ಆರು ಜನ ಕಾರ್ಮಿಕರು ಸಾವಿಗೀಡಾಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಜಯ್ ನಿರಾಣಿ ವಿರುದ್ಧ ಕಾನೂನು ಪ್ರಕಾರ ತನಿಖೆ ಮಾಡುವಂತೆ ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ.

2018ರಲ್ಲಿ ಮುಧೋಳದ ಕುಳಲಿ ಗ್ರಾಮದಲ್ಲಿರುವ ನಿರಾಣಿ ಶುಗರ್ಸ್ ನಲ್ಲಿನ ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಸ್ಫೋಟ ಸಂಭವಿಸಿ ಆರು ಜನ ಕಾರ್ಮಿಕರು ಸಾವಿಗೀಡಾಗಿದ್ದರು. ಆ ಪ್ರಕರಣದ ತನಿಖೆಯನ್ನು 2023ರಲ್ಲಿ  ನಿಲ್ಲಿಸಲಾಗಿತ್ತು.  ಈ ಆದೇಶದ ವಿರುದ್ಧ ರಾಜ್ಯ ಸರ್ಕಾರ, ಸುಪ್ರೀಂಕೋರ್ಟ್​ ಮೆಟ್ಟಿಲೇರಿತ್ತು. ಇದೀಗ ಸುಪ್ರಿಂಕೋರ್ಟ್​, ಹೈಕೋರ್ಟ್ ಆದೇಶವನ್ನು ರದ್ದುಪಡಿಸಿ ತನಿಖೆಗೆ ಆದೇಶಿಸಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version