ರಾಜ್ಯದ ಎಲ್ಲ ಮುಖ್ಯಮಂತ್ರಿಗಳ ಆಡಳಿತ ಅನಾವರಣಗೊಳಿಸುವ ಮ್ಯೂಸಿಯಂ ಸ್ಥಾಪನೆ ಅಗತ್ಯ : ಸಿಎಂ ಬಸವರಾಜ ಬೊಮ್ಮಾಯಿ - Mahanayaka
7:33 PM Friday 11 - September 2026

ರಾಜ್ಯದ ಎಲ್ಲ ಮುಖ್ಯಮಂತ್ರಿಗಳ ಆಡಳಿತ ಅನಾವರಣಗೊಳಿಸುವ ಮ್ಯೂಸಿಯಂ ಸ್ಥಾಪನೆ ಅಗತ್ಯ : ಸಿಎಂ ಬಸವರಾಜ ಬೊಮ್ಮಾಯಿ

k c reddy
25/02/2023

ಬೆಂಗಳೂರು: ರಾಜ್ಯದ ಪ್ರಥಮ ಮುಖ್ಯಮಂತ್ರಿ ಕೆ.ಸಿ.ರೆಡ್ಡಿ ಅವರ  ಹುಟ್ಟೂರಲ್ಲಿ  ಸ್ಮಾರಕ ನಿರ್ಮಿಸಲು  ಸರ್ಕಾರ ಅಗತ್ಯ  ಸಹಕಾರ ನೀಡಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು  ಕರ್ನಾಟಕದ ಪ್ರಥಮ ಮುಖ್ಯಮಂತ್ರಿ ಕೆ.ಸಿ.ರೆಡ್ಡಿ ಅವರ ಪ್ರತಿಮೆಯನ್ನು ವಿಧಾನಸೌಧದ  ಆವರಣದಲ್ಲಿ ಅನಾವರಣಗೊಳಿಸಿ ಮಾತನಾಡಿದರು.

ರಾಜ್ಯದ ಎಲ್ಲಾ  ಮುಖ್ಯಮಂತ್ರಿಗಳ  ಬಗ್ಗೆ ಸಾಹಿತ್ಯ ರಚನೆ ಮಾಡಿ ಜನರಿಗೆ ಹಾಗೂ  ಮಕ್ಕಳಿಗೆ ತಿಳಿಸುವ ಕೆಲಸ ಮಾಡಬೇಕಿದೆ. ಕರ್ನಾಟಕ ಏಕೀಕರಣದ ಹೋರಾಟ,  ಆಗಿನ ಜನರ  ಮನಸ್ಥಿತಿ ಬೇರೆ ಬೇರೆ ಹೋರಾಟಗಳು, ಎಲ್ಲ ಮುಖ್ಯ ಮಂತ್ರಿಗಳು ತೆಗೆದುಕೊಂಡ ತೀರ್ಮಾನಗಳ ಒಂದು ಮ್ಯೂಸಿಯಂ ಮಾಡುವ ಅವಶ್ಯಕತೆ ಇದೆ ಎಂದರು.

ನಾಡಿನ ಪ್ರಥಮ ಮುಖ್ಯಮಂತ್ರಿಗಳು ಹಾಗೂ  ಸ್ವಾತಂತ್ರ್ಯ ಹೋರಾಟಗಾರರಾದ  ಆದರ್ಶಪ್ರಾಯರಾದ ಕೆ.ಸಿ.ರೆಡ್ಡಿ  ಅವರು ಸ್ವಾತಂತ್ರ್ಯ ಬಂದ ಕೂಡಲೇ ರಾಜ್ಯದ ಪ್ರಥಮ ಮುಖ್ಯಮಂತ್ರಿಯಾಗಿ ಕೆಲಸ ಮಾಡಿದ್ದಾರೆ.  ರೈತ ಕುಟುಂಬದಿಂದ ಬಂದ ಅವರು ವಕೀಲರಾಗಿ, ಪತ್ರಕರ್ತರಾಗಿ ಕೆಲಸ ಮಾಡಿದ್ದಾರೆ. ಪ್ರಜಾಪ್ರತಿನಿಧಿ ಎಂಬ ಪಕ್ಷ ಕಟ್ಟಿದ್ದರು. ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವರಾಗಿಯೂ ಕೆಲಸ ಮಾಡಿದ್ದ ಅವರು ಭವಿಷ್ಯದ ನಾಡು ಕಟ್ಟಲು  ಅಗತ್ಯವಿರುವ , ಶಾಸನ ರಚನೆ, ಸರ್ಕಾರದ ಯಂತ್ರ ರಚನೆ ಎಲ್ಲವನ್ನು ತಾವಿದ್ದ  ನಾಲ್ಕೂವರೆ ವರ್ಷದಲ್ಲಿ ನಮಗೆ ಬಳುವಳಿಯಾಗಿ ನೀಡಿದ್ದಾರೆ.  ಅವರ ಆದರ್ಶ ನಮಗೆ ಬಿಟ್ಟು ಹೋಗಿದ್ದಾರೆ. ಆ ಮಹನೀಯರು ಹಾಕಿಕೊಟ್ಟ ಮಾರ್ಗದರ್ಶನದಲ್ಲಿ ನಾವು ನಡೆಯಬೇಕು ಎನ್ನುವುದು ನಮ್ಮ ನಂಬಿಕೆ ಎಂದರು.

ಅವರ ಜನ್ಮ ದಿನಾಚರಣೆಗೆ ಬಂದಾಗ ಅವರ ಪ್ರತಿಮೆ ಮಾಡುವ ಬಗ್ಗೆ ತೀರ್ಮಾನಿಸಲಾಗಿತ್ತು. ಅದರಂತೆ ಕರ್ನಾಟಕ ಅಡಿಪಾಯ ಹಾಕಿದ ನಾಯಕನನ್ನು ನೆನೆಯಲು ವಿಧಾನಸೌಧದಲ್ಲಿ ಪ್ರತಿಮೆ ಅನಾವರಣ ಮಾಡಲಾಗಿದೆ ಎಂದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

mobil chat sitesi Ucuz Uçak Bileti deneme bonusu veren siteler