ಸಂಗೀತ ಮಾಂತ್ರಿಕ ಇಳಯರಾಜ ಅವರ ಪುತ್ರಿ, ಗಾಯಕಿ ಭವತಾರಿಣಿ ಹಠಾತ್ ನಿಧನ

bhavatharini
26/01/2024

ಭಾರತೀಯ ಸಿನಿಮಾ ರಂಗದ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ ಅವರ ಪುತ್ರಿ, ಗಾಯಕಿ ಭವತಾರಿಣಿ ಹಠಾತ್ ನಿಧನರಾಗಿದ್ದು, ಅವರ ನಿಧನಕ್ಕೆ ತಮಿಳು ಚಿತ್ರರಂಗ ಕಂಬನಿ ಮಿಡಿದಿದೆ.

ಭವತಾರಿಣಿ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಹಠಾತ್ ನಿಧನರಾಗಿದ್ದಾರೆ. ಇವರ ನಿಧನಕ್ಕೆ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

ಶ್ರೀಲಂಕಾದಲ್ಲಿ ಭವತಾರಿಣಿ ಅವರಿಗೆ ಚಿಕಿತ್ಸೆ ನೀಡಲಾಗ್ತಿತ್ತು. ಅಲ್ಲಿಯೇ ಅವರು ಕೊನೆಯುಸಿರೆಳೆದಿದ್ದಾರೆ.  ಜನವರಿ 25ರಂದು ರಾತ್ರಿ ಅವರು ನಿಧನ ಹೊಂದಿದ್ದು, ಚೆನ್ನೈನಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ.

ಇತ್ತೀಚಿನ ಸುದ್ದಿ

Exit mobile version