ಹೆಚ್.ಡಿ. ತಮ್ಮಯ್ಯಗೆ ಕಾಂಗ್ರೆಸ್ ಟಿಕೆಟ್ ನೀಡದಂತೆ ಮುಸ್ಲಿಂ ಅಸೋಸಿಯೇಷನ್ ಎಚ್ಚರಿಕೆ

ಚಿಕ್ಕಮಗಳೂರು: ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿಚಾರವಾಗಿ ಆರಂಭಗೊಂಡಿರುವ ಆಕ್ರೋಶ ಇನ್ನೂ ನಿಂತಿಲ್ಲ. ಹೆಚ್.ಡಿ. ತಮ್ಮಯ್ಯಗೆ ಟಿಕೆಟ್ ನೀಡಿದರೆ ನಾವು ಬೆಂಬಲಿಸುವುದಿಲ್ಲ ಎಂದು ಚಿಕ್ಕಮಗಳೂರು ಮುಸ್ಲಿಂ ಅಸೋಸಿಯೇಷನ್ ಎಚ್ಚರಿಕೆ ನೀಡಿದೆ.
ಹೆಚ್.ಡಿ. ತಮ್ಮಯ್ಯಗೆ ಕಾಂಗ್ರೆಸ್ ಟಿಕೆಟ್ ನೀಡದಂತೆ ಒತ್ತಾಯಿಸಿರುವ ಮುಸ್ಲಿಮ್ ಮುಖಂಡರು, ತಮ್ಮಯ್ಯಗೆ ಟಿಕೆಟ್ ನೀಡಿದ್ರೆ ಮತದಾನದಿಂದ ದೂರ ಉಳಿಯುವ ಎಚ್ಚರಿಕೆ ನೀಡಿದ್ದಾರೆ.
ಕಳೆದ ಮೂರ್ನಾಲ್ಕು ದಿನಗಳಿಂದ ತಮ್ಮಯ್ಯ ವಿರುದ್ಧ ಸರಣಿ ಬಂಡಾಯದ ಸಭೆಗಳು ನಡೆದಿದ್ದು, ಕಾರ್ಯಕರ್ತರ ನಡುವೆ ಕೈ–ಕೈ ಮಿಲಾಯಿಸುವಂತಹ ಸನ್ನಿವೇಶ ಸೃಷ್ಟಿಯಾಗಿತ್ತು. ಇದೀಗ ಮುಸ್ಲಿಂ ಸಮುದಾಯದಿಂದಲೂ ತೀವ್ರ ವಿರೋಧ ವ್ಯಕ್ತವಾಗಿದೆ.ಟಿಕೆಟ್ ಗೆ ಅರ್ಜಿ ಹಾಕಿರುವ ಆರು ಜನರಲ್ಲಿ ಒಬ್ಬರಿಗೆ ಟಿಕೆಟ್ ನೀಡುವಂತೆ ಮುಸ್ಲಿಂ ಸಮುದಾಯ ಒತ್ತಾಯಿಸಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw