11:55 PM Saturday 31 - January 2026

ಮುಸ್ಲಿಮ್ ಲೀಗ್ ಜಾತ್ಯತೀತ ಪಕ್ಷ: ವಾಷಿಂಗ್ಟನ್ ನಲ್ಲಿ ರಾಹುಲ್ ಗಾಂಧಿ ಹೇಳಿಕೆ

02/06/2023

ಕೇರಳ ರಾಜ್ಯದ ಹಳೆಯ ಹಾಗೂ ನಮ್ಮ ಮಿತ್ರ ಪಕ್ಷವಾದ ಮುಸ್ಲಿಮ್ ಲೀಗ್ ಸಂಪೂರ್ಣ ಜಾತ್ಯತೀತ ಪಕ್ಷವಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ಅವರು ವಾಷಿಂಗ್ಟನ್ ಡಿಸಿಯ ನ್ಯಾಷನಲ್ ಪ್ರೆಸ್ ಕ್ಲಬ್‌ ನಲ್ಲಿ ಸುದ್ದಿಗಾರರೊಂದಿಗೆ ಜೊತೆಗಿನ ಸಂವಾದದ ಸಂದರ್ಭದಲ್ಲಿ ಗಾಂಧಿ ವಂಶಸ್ಥರ ಕುರಿತ ಹೇಳಿಕೆಗಳು, ಜಾತ್ಯತೀತತೆ ಪ್ರತಿಪಾದನೆ, ಬಿಜೆಪಿಯ ಹಿಂದುತ್ವ ರಾಜಕಾರಣ ಬಗ್ಗೆ ಅವರು ಮಾತನಾಡಿದರು.

ಇದೇ ವೇಳೆ ಕೇರಳದ ಮುಸ್ಲಿಂ ಲೀಗ್‌ ನೊಂದಿಗೆ ಕಾಂಗ್ರೆಸ್ ಮೈತ್ರಿ ಮಾಡಿಕೊಳ್ಳುವ ಬಗ್ಗೆ ವರದಿಗಾರ ಪ್ರಶ್ನೆಗಳಿಗೆ ಉತ್ತರಿಸಿದ ರಾಹುಲ್ ಗಾಂಧಿ, ಮುಸ್ಲಿಂ ಲೀಗ್ ಸಂಪೂರ್ಣವಾಗಿ ಜಾತ್ಯತೀತ ಪಕ್ಷವಾಗಿದೆ. ಮುಸ್ಲಿಂ ಲೀಗ್‌ನಲ್ಲಿ ಜಾತ್ಯತೀತವಲ್ಲದ್ದು ಯಾವುದೂ ಇಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ.

ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಕೇರಳದಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್‌ನ ಮಿತ್ರಪಕ್ಷವಾಗಿದೆ. ಸಂಸತ್ತಿನಿಂದ ಅನರ್ಹಗೊಳ್ಳುವ ಮೊದಲು ರಾಹುಲ್ ಗಾಂಧಿ ಲೋಕಸಭೆಯಲ್ಲಿ ವಯನಾಡ್ ಅನ್ನು ಪ್ರತಿನಿಧಿಸಿದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version