1:10 PM Wednesday 15 - October 2025

ಕ್ಯಾನ್ಸರ್ ಪೀಡಿತ ಮುಸ್ಲಿಮ್ ಮಹಿಳೆಯರಿಗೆ ನೀಡಲಾಗುವ ಸಹಾಯಧನ ಯೋಜನೆ ಹಿಂಪಡೆಯಬೇಕು, ಎಲ್ಲರಿಗೂ ಯೋಜನೆ ಜಾರಿಗೆ ತನ್ನಿ | ಯತ್ನಾಳ್ ಒತ್ತಾಯ

yathnal
25/08/2021

ವಿಜಯಪುರ: ಕ್ಯಾನ್ಸರ್ ಪೀಡಿತ ಮುಸ್ಲಿಮ್ ಮಹಿಳೆಯರಿಗೆ ರಾಜ್ಯ ಸರ್ಕಾರದಿಂದ ನೀಡಲಾಗುವ 1 ಲಕ್ಷ ರೂ. ಸಹಾಯಧನ ಯೋಜನೆ ಹಿಂಪಡೆಯಬೇಕು ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒತ್ತಾಯಿಸಿದ್ದಾರೆ.

ಮುಸ್ಲಿಮ್ ಮಹಿಳೆಯರಿಗೆ ರಾಜ್ಯ ಸರ್ಕಾರದಿಂದ ನೀಡಲಾಗುವ 1 ಲಕ್ಷ ರೂ. ಸಹಾಯಧನ ಯೋಜನೆ ಹಿಂಪಡೆದು, ಎಲ್ಲ ಜಾತಿ, ಜನಾಂಗ, ಧರ್ಮದವರಿಗೆ ಈ ಯೋಜನೆಯನ್ನು ಜಾರಿಗೆ ತರಬೇಕು. ಬಿಜೆಪಿ ಸರ್ಕಾರದಲ್ಲಿ ಮುಸ್ಲಿಮ್ ತುಷ್ಟೀಕರಣ, ತಾರತಮ್ಯ ಮಾಡುವುದು ಸರಿಯಲ್ಲ ಎಂದು ಅವರು ಸಿಎಂ ಬೊಮ್ಮಾಯಿ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಿಗೆ ಪತ್ರ ಬರೆದಿದ್ದಾರೆ ಎಂದು ವರದಿಯಾಗಿದೆ.

ಕ್ಯಾನ್ಸರ್‌ ರೋಗ ಯಾವುದೇ ಜಾತಿ ನೋಡಿ ಬರುವುದಿಲ್ಲ. ಇದು ಎಲ್ಲ ಬಡ ಜಾತಿ, ಜನಾಂಗ, ಧರ್ಮದವರಿಗೂ ಬರುತ್ತದೆ. ಇದರಿಂದ ಬಿ.ಪಿ.ಎಲ್ ಕಾರ್ಡ್‌ ಹೊಂದಿದ ಬಡ ಜನರಿಗೆ ಸರ್ಕಾರದ ಸೌಲಭ್ಯ ದೊರಕಿಸಿ ಕೊಡಬೇಕು ಎಂದು ಯತ್ನಾಳ್ ಒತ್ತಾಯಿಸಿದ್ದಾರೆ.

ಕ್ಯಾನ್ಸರ್ ಪೀಡಿತ ಪ್ರತಿಯೊಬ್ಬ ಪ್ರಜೆಗೂ ಇದರ ಲಾಭ ಲಭಿಸಬೇಕೇ ಹೊರತು, ಕೇವಲ ಮುಸ್ಲಿಮರಿಗಲ್ಲ. ಇಲ್ಲದಿದ್ದರೆ ನಮ್ಮ ಸರ್ಕಾರಕ್ಕೂ ಇತರೇ ಪಕ್ಷಗಳ ಸರ್ಕಾರಕ್ಕೂ ಯಾವುದೇ  ವ್ಯತ್ಯಾಸವಿರುವುದಿಲ್ಲ ಎಂದು ಅವರು ಆಗ್ರಹಿಸಿದ್ದಾರೆ.

ಇನ್ನಷ್ಟು ಸುದ್ದಿಗಳು…

ಈಗ ಮನಮೋಹನ್ ಸಿಂಗ್ ಪ್ರಧಾನಿಯಾಗಿರುತ್ತಿದ್ದರೆ, ಭಾರತೀಯರು ರಕ್ಷಣೆಗಾಗಿ ಪರದಾಡಬೇಕಿತ್ತು | ನಳಿನ್ ಕುಮಾರ್ ಕಟೀಲ್

ಅಂಬೇಡ್ಕರ್ ಸಂಶೋಧಕಿ, ದಲಿತ ಚಳುವಳಿಗಾರ್ತಿ ಡಾ.ಗೇಲ್ ಓಮ್ವೇಡ್ ನಿಧನ

ಬಿಜೆಪಿ ಸರ್ಕಾರದ ಸ್ಥಿತಿ ‘ಒಲ್ಲದ ಸಂಸಾರ’ದಂತಿದೆ, ಯಾವಾಗ ಬೇಕಾದರೂ ಡಿವೋರ್ಸ್ ಆಗಬಹುದು | ಕಾಂಗ್ರೆಸ್

ಪೊಲೀಸರನ್ನು ಕ್ಯಾರೇ ಮಾಡದೇ ಬಿಜೆಪಿಯಿಂದ ಮಂಡ್ಯದಲ್ಲಿ ಬೃಹತ್ ರಾಜಕೀಯ ಜಾತ್ರೆ!

ನಟಿಯರು ಡ್ರಗ್ಸ್ ಸೇವಿಸಿದ್ದು ದೃಡವಾಗಿದೆ, ಕೇಸ್ ಇನ್ನಷ್ಟು ಗಟ್ಟಿಯಾಗಿದೆ | ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದೇನು?

ದಂತ ವೈದ್ಯನ ಕೈಯಿಂದ ಜಾರಿದ ಸ್ಕ್ರೂ ವೃದ್ಧನ ಶ್ವಾಸಕೋಶ ಸೇರಿತು | ಮುಂದೆ ನಡೆದದ್ದೇನು ಗೊತ್ತಾ?

ಕಾಂಗ್ರೆಸ್ ಭಯೋತ್ಪಾದನೆಯ ಮನಸ್ಥಿತಿಗಳನ್ನು ಪ್ರೋತ್ಸಾಹಿಸುತ್ತದೆ | ಸಚಿವೆ ಶೋಭಾ ಕರಂದ್ಲಾಜೆ

ಇತ್ತೀಚಿನ ಸುದ್ದಿ

Exit mobile version