ಮಹಾರಾಷ್ಟ್ರದಲ್ಲಿ ಗೋಮಾಂಸ ಕಳ್ಳಸಾಗಣೆ ಆರೋಪ: ಕಾರನ್ನು ಅಡ್ಡಗಟ್ಟಿ ಮುಸ್ಲಿಂ ವ್ಯಕ್ತಿಯ ಬರ್ಬರ ಹತ್ಯೆ

ಗೋಮಾಂಸ ಸಾಗಾಟ ಮಾಡುತ್ತಿದ್ದಾರೆಂದು ಆರೋಪಿಸಿ 15 ಜನರ ಸ್ವಯಂಘೋಷಿತ ಗೋರಕ್ಷಕರ ಗುಂಪೊಂದು ಮುಸ್ಲಿಂ ವ್ಯಕ್ತಿಯನ್ನು ಕೊಲೆ ಮಾಡಿದ ಘಟನೆ ಮುಂಬೈ ನಾಸಿಕ್‌ನಲ್ಲಿ ನಡೆದಿದೆ.
ಅಫಾನ್ (32) ಹಾಗೂ ನಾಸಿರ್ (24) ಎಂಬ ಇಬ್ಬರು ಯುವಕರು ತಮ್ಮ ಕಾರಿನಲ್ಲಿ ಮಾಂಸ ಕೊಂಡೊಯ್ಯುತ್ತಿದ್ದರು. ಇದನ್ನು ಗೋಮಾಂಸ ಎಂದು ಶಂಕಿಸಿದ ಗೋರಕ್ಷಕರ ಗುಂಪು ದಾಳಿ ನಡೆಸಿತ್ತು. ಪರಿಣಾಮ ಇಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾದರು. ಅಫಾನ್ ಸಾವನ್ನಪ್ಪಿದ್ದಾರೆ. ಬಳಿಕ ನಾಸಿರ್ ದೂರಿನ ಮೇರೆಗೆ 11 ಜನರನ್ನು ಪೊಲೀಸರು ಬಂಧಿಸಿದ್ದಾರೆ.
ಮಾಂಸವನ್ನು ಪರೀಕ್ಷೆಗೆ ಕಳಿಸಲಾಗಿದೆ. ನಾವು ಸ್ಥಳವನ್ನು ತಲುಪಿದಾಗ, ಕಾರು ಹಾನಿಗೊಳಗಾದ ಸ್ಥಿತಿಯಲ್ಲಿತ್ತು. ಗಾಯಗೊಂಡ ಪುರುಷರು ಕಾರಿನೊಳಗೆ ಇದ್ದರು ಮತ್ತು ನಾವು ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದೇವೆ, ಅಲ್ಲಿ ಅವರಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ ” ಎಂದು ಸಬ್ ಇನ್ಸ್ ಪೆಕ್ಟರ್ ಸುನಿಲ್ ಭಾಮ್ರೆ ಹೇಳಿದರು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈವರೆಗೆ 11 ಜನರನ್ನು ವಶಕ್ಕೆ ಪಡೆದಿದ್ದಾರೆ. ಗಾಯಗೊಂಡ ವ್ಯಕ್ತಿಯ ದೂರಿನ ಮೇರೆಗೆ, ನಾವು ಕೊಲೆ ಮತ್ತು ಗಲಭೆಯ ಪ್ರಕರಣವನ್ನು ದಾಖಲಿಸಿದ್ದೇವೆ ಮತ್ತು ಅದರ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.
ಅವರು ನಿಜವಾಗಿಯೂ ಗೋಮಾಂಸವನ್ನು ಸಾಗಿಸುತ್ತಿದ್ದರೇ ಅಥವಾ ಇಲ್ಲವೇ ಎಂಬುದು ಪ್ರಯೋಗಾಲಯದ ವರದಿ ಬಂದ ನಂತರವೇ ತಿಳಿಯಲಿದೆ ಎಂದು ಪೊಲೀಸರು ಹೇಳಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw