8:22 AM Friday 19 - September 2025

ಉಡುಪಿ ಮಠಕ್ಕೆ ಜಾಗ ನೀಡಿದ್ದು ಮುಸ್ಲಿಮ್ ರಾಜಾ: ಮಿಥುನ್ ರೈ ಹೇಳಿಕೆ ವಿರುದ್ಧ ಬಿಜೆಪಿ ಪರ ಸಂಘಟನೆಗಳು ಕಿಡಿ

mithun rai
08/03/2023

ಮಂಗಳೂರು: ಕಾಂಗ್ರೆಸ್ ಯುವ ಮುಖಂಡ ಮಿಥುನ್ ರೈ ಅವರು ಹಿಂದೂ, ಮುಸಲ್ಮಾನರ ಸೌಹಾರ್ದದ ಕುರಿತು ಮಾತನಾಡುತ್ತಾ ನೀಡಿರುವ ಹೇಳಿಕೆಗೆ ಬಿಜೆಪಿ ನಾಯಕರು ಇದೀಗ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೂಡಬಿದಿರೆ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿರುವ ಮಿಥುನ್ ರೈ ಪುತ್ತಿಗೆಯಲ್ಲಿ ನಡೆದ ನಮ್ಮೂರ ಮಸೀದಿ ನೋಡ ಬನ್ನಿ ಕಾರ್ಯಕ್ರಮದಲ್ಲಿ ಮಾತನಾಡುತ್ತಾ, ಬಪ್ಪನಾಡಿನ ಪಂಚದುರ್ಗ ಅಪ್ಪೆ ಒಲಿದಿರೋದು ಬಪ್ಪ ಬ್ಯಾರಿಗೆ, ಕೌತ್ತಾರ್ ನಲ್ಲಿ ಕೊರಗಜ್ಜನ ಕಟ್ಟೆ ಇದೆ, ಆ ಕೊರಗಜ್ಜನ ಕಟ್ಟೆಯಲ್ಲಿ ಪ್ರಧಾನ ಅರ್ಚಕ ಒಬ್ಬ ಮುಸಲ್ಮಾನ,  ಉಡುಪಿ ಶ್ರೀ ಕೃಷ್ಣ ಮಠಕ್ಕೆ ಜಾಗ ನೀಡಿರೋದು ಮುಸಲ್ಮಾನ ರಾಜಾ  ಎಂದು ಮಿಥುನ್ ರೈ ಹೇಳಿದರು.

ಮಿಥುನ್ ರೈ ಅವರು ಉಡುಪಿ ಮಠದ ಬಗ್ಗೆ ನೀಡಿರುವ ಹೇಳಿಕೆ ವಿವಾದಾತ್ಮಕ ಹೇಳಿಕೆಯಾಗಿದೆ ಎಂದು ಬಿಜೆಪಿ ಪರ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ.

ಬಿಜೆಪಿ ಪರ ಸಂಘಟನೆಗಳ ವ್ಯಾಪಕ ಆಕ್ರೋಶದ ಬಳಿಕ  ಮಿಥುನ್ ರೈ ತಮ್ಮ ಹೇಳಿಕೆಯನ್ನು ಸಮರ್ಥಿಸಿದ್ದು, ಸೌಹಾರ್ದತೆಯ ಕುರಿತು ನಾನು ಹೇಳಿಕೆ ನೀಡಿದ್ದೇನೆ ಪ್ರತಿಕ್ರಿಯಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

 

ಇತ್ತೀಚಿನ ಸುದ್ದಿ

Exit mobile version