ಕಾಂತಾರ ನೋಡಲು ಬಂದ ಮುಸ್ಲಿಮ್ ವಿದ್ಯಾರ್ಥಿ—ವಿದ್ಯಾರ್ಥಿನಿಗೆ ಮುಸ್ಲಿಮ್ ಯುವಕರಿಂದ ತರಾಟೆ! | ವಿಡಿಯೋ ವೈರಲ್
ಕಾಂತಾರ ಸಿನಿಮಾ ನೋಡಲು ಥಿಯೇಟರ್ ಗೆ ಹೋದ ಮುಸ್ಲಿಂ ಸಮುದಾಯದ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯನ್ನು ಮುಸ್ಲಿಂ ಯುವಕರು ತರಾಟೆಗೆ ಎತ್ತಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ನಡೆದಿದೆ.
ಸುಳ್ಯದ ಸಂತೋಷ್ ಚಿತ್ರಮಂದಿರದಲ್ಲಿ ಘಟನೆ ನಡೆದಿದ್ದು, ಕಾಲೇಜು ತಪ್ಪಿಸಿ ಕಾಂತಾರ ಸಿನಿಮಾ ವೀಕ್ಷಣೆಗೆ ಬಂದಿದ್ದಕ್ಕೆ ಯುವಕರು ತರಾಟೆಗೆ ತೆಗೆದುಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.
ಹಿಜಾಬ್ ಧರಿಸಿದ್ದ ಯುವತಿ ಮತ್ತು ಅದೇ ಸಮುದಾಯದ ಯುವಕ ಕಾಂತಾರ ಸಿನಿಮಾ ವೀಕ್ಷಣೆಗೆ ಥಿಯೇಟರ್ ಗೆ ಬಂದಿದ್ದ ಬಗ್ಗೆ ಮಾಹಿತಿ ಪಡೆದ ಯುವಕರು ತರಾಟೆಗೆ ತೆಗೆದುಕೊಂಡಿದ್ದಾರೆ.
ವಾಹನ ಪಾರ್ಕಿಂಗ್ ಸ್ಥಳದಲ್ಲಿ ಸ್ಥಳೀಯ ಕೆಲವು ಮುಸ್ಲಿಂ ಯುವಕರು ವಿದ್ಯಾರ್ಥಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಸುಳ್ಯದ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳು ಕೇರಳ ಮೂಲದವರಾಗಿದ್ದು, ಮುಸ್ಲಿಂ ಯುವಕರ ಎಚ್ಚರಿಕೆ ಬಳಿಕ ವಿದ್ಯಾರ್ಥಿಗಳು ಸ್ಥಳದಿಂದ ತೆರಳಿದ್ದಾರೆ ಎನ್ನಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka