11:08 PM Tuesday 14 - October 2025

ಮುಸ್ಲಿಂ ಯುವಕನ ಹೆಸರಿನಲ್ಲಿ ಬಿಜೆಪಿ ಎಂಎಲ್ಸಿಗೆ ಜೀವ ಬೆದರಿಕೆ: ಆರೋಪಿಯ ಬಂಧನ

mlc arun
23/03/2022

ಶಿವಮೊಗ್ಗ: ವಿಧಾನ ಪರಿಷತ್‌ನ ಬಿಜೆಪಿ ಸದಸ್ಯ ಡಿ.ಎಸ್.ಅರುಣ್ ಅವರಿಗೆ ಫೇಸ್‌ಬುಕ್‌ ಮೂಲಕ ಕೊಲೆ ಬೆದರಿಕೆ ಹಾಕಿದ್ದ ಆರೋಪಿಯನ್ನು ಬಾಗಲಕೋಟೆ ಠಾಣಾ ಪೊಲೀಸರು ಮಂಗಳವಾರ ಬಂಧಿಸಿರುವ ಬಗ್ಗೆ ವರದಿಯಾಗಿದೆ.

ಬೆಳಗಾವಿ ತಾಲೂಕಿನ ಗೋಕಾಕದ ಶಿಂದಿಕುರಬೆಟ್‌ನ ಸಿದ್ಧಾರೂಢ ಶ್ರೀಕಾಂತ್ (31) ಬಂಧಿತ ಆರೋಪಿಯಾಗಿದ್ದಾನೆ. ಶಿವಮೊಗ್ಗದಲ್ಲಿ ಬಜರಂಗ ದಳದ ಕಾರ್ಯಕರ್ತ ಹರ್ಷ ಕೊಲೆಯ ನಂತರ ಅರುಣ್ ವಿರುದ್ಧ ಈತ ಮುಸ್ತಾಕ್ ಎಂಬ ನಕಲಿ ಹೆಸರಿನ ಫೇಸ್‌ಬುಕ್‌ ಖಾತೆ ಮೂಲಕ ಕೊಲೆ ಬೆದರಿಕೆ ಹಾಕಿದ್ದ.

‘ನಿಮ್ಮ ತಲೆಯಲ್ಲಿ ಇವತ್ತು ಕೇವಲ ಒಬ್ಬ ಹಿಂದೂ ಕಾರ್ಯಕರ್ತ ಸತ್ತಿದ್ದಾನೆ ಅಷ್ಟೆ. ಆದ್ರೆ ಮುಂದಿನ ದಿನ ನಿಮ್ಮ ಹೆಂಡಿರು, ಮಕ್ಕಳೇ ನಮ್ಮವರ ಟಾರ್ಗೆಟ್‌ ‘ ಎಂದು ಫೇಸ್‌ಬುಕ್‌ನಲ್ಲಿ ಬೆದರಿಕೆ ಹಾಕಲಾಗಿತ್ತು.

ಬಾಗಲಕೋಟೆ ಪೊಲೀಸರು ಬೇರೊಂದು ಪ್ರಕರಣದಲ್ಲಿ ಆರೋಪಿಯನ್ನು ಬಂಧಿಸಿದಾಗ ಮುಸ್ಲಿಂ ಯುವಕನ ಹೆಸರಲ್ಲಿ ಅರುಣ್‌ಗೆ ಬೆದರಿಕೆ ಹಾಕಿದ ವಿಷಯ ಬೆಳಕಿಗೆ ಬಂದಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/FZkISFWKknBDvdYkMVFArW

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಇಲಾಖೆಯ ಪೂರ್ವಾನುಮತಿ ಇಲ್ಲದೆ ವಿದೇಶ ಪ್ರಯಾಣ: ಇನ್‌ಸ್ಪೆಕ್ಟರ್‌ ಅಮಾನತು

ದಲಿತ ಯುವಕನ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ: ಆ್ಯಸಿಡ್​​ನಿಂದ ಹಣೆ ಮೇಲೆ ತ್ರಿಶೂಲ ಬಿಡಿಸಿ, ಚಿತ್ರಹಿಂಸೆ

ಧಾರ್ಮಿಕ ಭಾವನೆಗಳಿಗೆ ಧಕ್ಕೆ ಆರೋಪ: ಉ.ಪ್ರ. ನಿಯೋಜಿತ ಸಿಎಂ ಯೋಗಿ ಆದಿತ್ಯನಾಥ್​ಗೆ ನೋಟಿಸ್​ ಜಾರಿ

ಟಿಂಬರ್ ಗೋದಾಮಿನಲ್ಲಿ ಭಾರೀ ಅಗ್ನಿ ಅನಾಹುತ: 11 ಮಂದಿ ಸಜೀವ ದಹನ

ಇತ್ತೀಚಿನ ಸುದ್ದಿ

Exit mobile version