ಮುಸ್ಲಿಮರ ಪ್ರಯಾಣ ನಿಷೇಧ ನೀತಿಯನ್ನು ರದ್ದುಪಡಿಸಿದ ಬೈಡನ್‌ - Mahanayaka
12:05 PM Saturday 31 - January 2026

ಮುಸ್ಲಿಮರ ಪ್ರಯಾಣ ನಿಷೇಧ ನೀತಿಯನ್ನು ರದ್ದುಪಡಿಸಿದ ಬೈಡನ್‌

21/01/2021

ವಾಷಿಂಗ್ಟನ್: ಅಧಿಕಾರ ಸ್ವೀಕರಿಸಿದ ಕೆಲವೇ ಗಂಟೆಗಳಲ್ಲಿ ಡೊನಾಲ್ಡ್ ಟ್ರಂಪ್ ಸರ್ಕಾರದ ಹಲವು ನೀತಿಗಳನ್ನು ರದ್ದುಪಡಿಸಿದ್ದಾರೆ. ಟ್ರಂಪ್ ತನ್ನ ಆಡಳಿತಾವಧಿಯಲ್ಲಿ ಹಲವು ಮಾನವ ವಿರೋಧಿ ಜಾರಿಗೆ ತಂದಿದ್ದು, ಇದೀಗ ಮುಸ್ಲೀಮರ ಪ್ರಯಾಣ ನಿಷೇಧ ನೀತಿಯ ರದ್ದು ಸೇರಿದಂತೆ 17 ಪ್ರಮುಖ ಆದೇಶಗಳಿಗೆ ಬೈಡನ್‌ ಸಹಿ ಮಾಡಿದ್ದಾರೆ.

ಮುಸ್ಲೀಮರ ಪ್ರಯಾಣ ನಿರ್ಬಂಧ ನೀತಿಯಿಂದಾಗಿ ಮುಸ್ಲೀಮರು ಬಹುಸಂಖ್ಯಾತರಾಗಿರುವ ದೇಶಗಳ ಪ್ರಯಾಣಿಕರ ಅಮೆರಿಕ ಪ್ರಯಾಣವನ್ನು ‘ಮುಸ್ಲೀಮರ ಪ್ರಯಾಣ ನಿಷೇಧ ನೀತಿ’ ನಿರ್ಬಂಧಿಸಿತ್ತು. ಇದೀಗ ಈ ನೀತಿಯಿಂದ ತೊಂದರೆ ಅನುಭವಿಸಿದ ಪ್ರದೇಶದವರಿಗೆ ವೀಸಾ ನೀಡುವ ಪ್ರಕ್ರಿಯೆ ಆರಂಭಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಅಕ್ರಮ ವಲಸಿಕರನ್ನು ಪತ್ತೆ ಮಾಡಿ ಗಡಿಪಾರು ಮಾಡುವ ಟ್ರಂಪ್‌ ಸರ್ಕಾರದ ಕ್ರಮಕ್ಕೆ ತಡೆಯೊಡ್ಡಿರುವ ಬೈಡನ್‌, ಮೆಕ್ಸಿಕೊ ಗಡಿಯುದ್ದಕ್ಕೂ ನಿರ್ಮಿಸಲು ಯೋಜಿಸಿದ್ದ ಗೋಡೆ ಕಾಮಗಾರಿಗೆ ‘ತಕ್ಷಣದ ಮುಕ್ತಾಯ’ ಘೋಷಿಸಿದ್ದಾರೆ. ಪ್ಯಾರಿಸ್‌ ಒಪ್ಪಂದಕ್ಕೆ ಮರುಸೇರ್ಪಡೆ ಹಾಗೂ ವಲಸಿಗ ನಿರಾಶ್ರಿತರ ರಕ್ಷಣೆಗೂ ಕ್ರಮ ಕೈಗೊಂಡಿದ್ದಾರೆ.

ಇತ್ತೀಚಿನ ಸುದ್ದಿ