ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿ ನೀಡಲು ಮಹಾರಾಷ್ಟ್ರದ ಮುಸ್ಲಿಮರ ಆಗ್ರಹ

ಶಿಕ್ಷಣ ಸಂಸ್ಥೆಗಳು ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ನೀಡಬೇಕು ಎಂದು ಮಹಾರಾಷ್ಟ್ರದ ಮುಸ್ಲಿಮರು ಸರ್ಕಾರವನ್ನು ಆಗ್ರಹಿಸಿದ್ದಾರೆ. ಅಲ್ಲದೇ ಲೋಕಸಭೆ ಮತ್ತು ವಿಧಾನಸಭೆಗಳಲ್ಲಿ ಮುಸ್ಲಿಂ ಜನಪ್ರತಿನಿಧಿಗಳ ಸಂಖ್ಯೆ ಇಳಿಮುಖವಾಗುತ್ತಿದ್ದು ಮುಸ್ಲಿಮರಿಗೆ ರಾಜಕೀಯ ಮೀಸಲಾತಿಯನ್ನು ಒದಗಿಸಬೇಕು ಎಂದು ಆ ಗ್ರಹಿಸಿದ್ದಾರೆ. ಮುಸ್ಲಿಂ ವೆಲ್ಫೇರ್ ಅಸೋಸಿಯೇಷನ್ ಎಂಬ ಬ್ಯಾನರ್ ನ ಅಡಿಯಲ್ಲಿ ಮುಸ್ಲಿಮರು ಒಂದಾಗಿ ಈ ಬೇಡಿಕೆ ಇಟ್ಟಿದ್ದಾರೆ.
ಮುಸ್ಲಿಮರ ಈ ಬೇಡಿಕೆಯನ್ನು ಆಡಳಿತರೂಢ ಮೈತ್ರಿಕೂಟದ ಭಾಗವಾಗಿರುವ ಅಜಿತ ಪವಾರ್ ಅವರ ಎನ್ ಸಿ ಪಿ ಮತ್ತು ಸಮಾಜವಾದಿ ಪಕ್ಷಗಳು ಈಗಾಗಲೇ ಬೆಂಬಲಿಸಿವೆ. ಕಾಂಗ್ರೆಸ್ಸಿನ ಅಧಿಕಾರದ ಅವಧಿಯಲ್ಲಿ ಓಬಿಸಿಗಳು ಎಸ್ ಸಿ ಮತ್ತು ಎಸ್ ಸಿ ಗಳ ಮೀಸಲಾತಿಯನ್ನು ಕಿತ್ತುಕೊಂಡು ಮುಸ್ಲಿಮರಿಗೆ ನೀಡಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ಲೋಕಸಭಾ ಚುನಾವಣೆಯ ವೇಳೆ ಭಾಷಣ ಮಾಡಿದ್ದರು. ಮುಂದಿನ ವಿಧಾನಸ ವಿಧಾನಸಭಾ ಕಲಾಪದಲ್ಲಿ ಮುಸ್ಲಿಂ ಮೀಸಲಾತಿಯ ಬಗ್ಗೆ ಚರ್ಚೆ ನಡೆಯದೆ ಇದ್ದರೆ ನಾವು ನಮ್ಮ ಪ್ರತಿಭಟನೆಯನ್ನು ತೀವ್ರಗೊಳಿಸುವುದಾಗಿ ಮುಸ್ಲಿಂ ವೆಲ್ಫೇರ್ ಅಸೋಸಿಯೇಷನ್ ಹೇಳಿದೆ. ಈಗಾಗಲೇ ಮುಸ್ಲಿಂ ವೆಲ್ ಫೇರ್ ಅಸೋಸಿಯೇಷನ್ ತನ್ನ ಆಗ್ರಹವನ್ನು ಪತ್ರಿಕಾಗೋಷ್ಠಿ ಕರೆದು ಮಾಧ್ಯಮಗಳ ಮುಂದೆ ಇಟ್ಟಿದೆ. ಏನ್ ಡಿ ಎ ಮಿತ್ರ ಪಕ್ಷವಾದ ತೆಲುಗು ದೇಶಂ ಪಾರ್ಟಿ ಈಗಾಗಲೇ ಮುಸ್ಲಿಮರಿಗೆ ನಾಲ್ಕು ಶೇಕಡ ಮೀಸಲಾತಿ ಘೋಷಿಸಿರುವುದನ್ನು ಕೂಡ ಈ ಸಂದರ್ಭದಲ್ಲಿ ಮುಸ್ಲಿಂ ಅಸೋಸಿಯೇಷನ್ ಉಲ್ಲೇಖಿಸಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth