‘ಮುಸ್ಲಿಮರು ಕಾಂಡೋಮ್ ಹೆಚ್ಚು ಬಳಸುತ್ತಾರೆ’: ಪ್ರಧಾನಿ ಹೇಳಿಕೆಗೆ ಓವೈಸಿ ತಿರುಗೇಟು

ಭಾರತದಲ್ಲಿ ಮುಸ್ಲಿಂ ಪುರುಷರು ಕಾಂಡೋಮ್ ಅನ್ನು ಹೆಚ್ಚು ಬಳಸುತ್ತಾರೆ ಎಂದು ಹೈದರಾಬಾದ್ ಸಂಸದ ಅಸಾದುದ್ದೀನ್ ಒವೈಸಿ ಹೇಳಿದ್ದಾರೆ. ಮುಸ್ಲಿಂ ಸಮುದಾಯವನ್ನು ಹೆಚ್ಚು ಮಕ್ಕಳನ್ನು ಹೊಂದಿರುವವರು ಎಂದು ಉಲ್ಲೇಖಿಸಿ ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆಗೆ ಪ್ರತಿಯಾಗಿ ಅವರು ಈ ರೀತಿ ತಿರುಗೇಟು ನೀಡಿದ್ದಾರೆ.
ಹಿಂದೂ ಸಮುದಾಯದಲ್ಲಿ ದ್ವೇಷವನ್ನು ತುಂಬಲು ಪ್ರಧಾನಿ ನರೇಂದ್ರ ಮೋದಿ ಸುಳ್ಳುಗಳನ್ನು ಹರಡುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.
“ಮುಸ್ಲಿಮರು ಹೆಚ್ಚು ಮಕ್ಕಳನ್ನು ಹೆರುತ್ತಿದ್ದಾರೆ ಎಂದು ಪ್ರಧಾನಿ ಹೇಳುತ್ತಿದ್ದಾರೆ. ಮೋದಿ ಸರ್ಕಾರದ ಅಂಕಿಅಂಶಗಳೇ ಮುಸ್ಲಿಮರ ಫಲವತ್ತತೆ ಪ್ರಮಾಣ ಕುಸಿದಿದೆ ಎಂದು ಹೇಳುತ್ತದೆ. ಆದರೆ ನಾವು ಹೆಚ್ಚು ಮಕ್ಕಳನ್ನು ಹೇರುತ್ತಿದ್ದೇವೆ ಎಂದು ಅವರು ಹೇಳುತ್ತಿದ್ದಾರೆ. ಭಾರತದಲ್ಲಿ ಮುಸ್ಲಿಮರು ಬಹುಸಂಖ್ಯಾತರಾಗುತ್ತಾರೆ ಎಂದು ಹೇಳಲು ಬಿಜೆಪಿ ಮತ್ತು ಆರ್ಎಸ್ಎಸ್ ಈ ಸುಳ್ಳನ್ನು ಹರಡುತ್ತಿವೆ” ಎಂದು ಹೈದರಾಬಾದ್ನಿಂದ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಓವೈಸಿ ಸಾರ್ವಜನಿಕ ರ್ಯಾಲಿಯಲ್ಲಿ ಹೇಳಿದ್ದಾರೆ.
“ಭಾರತದಲ್ಲಿ ಪುರುಷರಲ್ಲಿ ಯಾರಾದರೂ ಕಾಂಡೋಮ್ ಅನ್ನು ಹೆಚ್ಚು ಬಳಸಿದರೆ, ಅವರು ಮುಸ್ಲಿಮರು. ನಾನು ಇದನ್ನು ಹೇಳುತ್ತಿಲ್ಲ. ಇದು ಸರ್ಕಾರದ ಅಂಕಿಅಂಶ” ಎಂದು ಉವೈಸಿ ಹೇಳಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth