7:51 AM Thursday 16 - October 2025

ಮುಸ್ಲಿಂ ವಿದ್ಯಾರ್ಥಿನಿಯರಿಗೆ ಕಾಲೇಜು ಗೇಟ್ ಹಾಕಿರುವುದು ಸಂವಿಧಾನ ವಿರೋಧಿ: ಸಿದ್ದರಾಮಯ್ಯ

siddaramaiha
04/02/2022

ಬೆಂಗಳೂರು: ಕುಂದಾಪುರದ ಕಾಲೇಜಿನ ಪ್ರಾಂಶುಪಾಲರು ಮುಸ್ಲಿಂ ವಿದ್ಯಾರ್ಥಿನಿಯರಿಗೆ ಕಾಲೇಜು ಗೇಟ್ ಹಾಕಿರುವುದು ಸಂವಿಧಾನ ವಿರೋಧಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಸಂವಿಧಾನದಲ್ಲಿ ನೀಡಿರುವ ಮೂಲಭೂತ ಹಕ್ಕು. ಅವರು ಯಾರೋ ಕೇಸರಿ ಶಾಲು ಹಾಕಿಕೊಂಡು ಬಂದಿದ್ದರಲ್ಲ, ಅವರ ವಿರುದ್ದ ಏನೋ ಕ್ರಮ? ಇದನ್ನೆಲ್ಲಾ ಬಿಜೆಪಿಗರು ಮಾಡಿಸುತ್ತಿದ್ದಾರೆ. ಸಮವಸ್ತ್ರ ಕಡ್ಡಾಯ ಮಾಡಬೇಕು ಎಂದು ಎಲ್ಲೂ ಹೇಳಿಲ್ಲ ಎಂದರು.
ವಿದ್ಯಾರ್ಥಿಗಳು ನ್ಯಾಯಾಲಯದ ಮೊರೆ ಹೋಗಿದ್ದಾರೆ. ಏನಾಗುತ್ತದೆ ನೋಡೋಣ. ವೈಯಕ್ತಿಕವಾಗಿ ಹೇಳುವುದಾದರೆ ಹಿಜಾಬ್ ವಿದ್ಯಾರ್ಥಿನಿಯರ ಮೂಲಭೂತ ಹಕ್ಕು. ಅವರ ವಿದ್ಯಾಭ್ಯಾಸ ತಡೆಗಟ್ಟುವ ಪ್ರಯತ್ನ ನಡೆಯುತ್ತಿದೆ ಎಂದರು.

ಕುಂದಾಪುರದ ಜೂನಿಯರ್ ಕಾಲೇಜಿನಲ್ಲಿ ಹಿಜಾಬ್ ಧರಿಸಿದ ವಿದ್ಯಾರ್ಥಿನಿಗಳಿಗೆ ಪ್ರವೇಶ ನಿರಾಕರಣೆ ಮಾಡಿದ ಕಾರಣಕ್ಕಾಗಿ ಶಾಲೆಗೆ ಪೋಷಕರು ಮುತ್ತಿಗೆ ಹಾಕಿದ ಘಟನೆ ಶುಕ್ರವಾರ ನಡೆದಿದೆ. ಸುಮಾರು 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಬಂದಿದ್ದಾರೆ. ಬೈಂದೂರಿನಲ್ಲೂ ಕೇಸರಿ ಶಾಲು ಧರಿಸಿ ವಿದ್ಯಾರ್ಥಿಗಳು ಬಂದ ಘಟನೆ ನಡೆದಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bk3PAoJFRvJLUSBPd39m1C

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಮಾ.12ಕ್ಕೆ ನಿಗದಿಯಾಗಿದ್ದ ನೀಟ್‌ ಪಿಜಿ ಪರೀಕ್ಷೆ ಮುಂದೂಡಿಕೆ

ಭೀಕರ ರಸ್ತೆ ಅಪಘಾತ: ಆರು ಮಂದಿ ಸಾವು

ಓಮಸತ್ವ, ಕಸ್ತೂರಿ ಮಾರಾಟ ಮಾಡುವ ನೆಪದಲ್ಲಿ ಮಹಿಳೆಯ ಅತ್ಯಾಚಾರ ಯತ್ನ

ನಿರ್ಮಾಣ ಹಂತದ ಕಟ್ಟಡ ಕುಸಿತ: 6 ಮಂದಿ ಬಡ ಕಾರ್ಮಿಕರು ಬಲಿ

ಬಿಎಸ್‌ಪಿ ಮಾತ್ರ ದೇಶಕ್ಕೆ ಅಚ್ಛೇದಿನ್ ತರಬಲ್ಲ ಪಕ್ಷ: ಮಾಯಾವತಿ

 

ಇತ್ತೀಚಿನ ಸುದ್ದಿ

Exit mobile version