ಕೃಷಿ ಹೊಂಡಕ್ಕೆ ಬಿದ್ದು ಮೂವರು ಮಕ್ಕಳ ದಾರುಣ ಸಾವು! - Mahanayaka
10:25 PM Saturday 8 - November 2025

ಕೃಷಿ ಹೊಂಡಕ್ಕೆ ಬಿದ್ದು ಮೂವರು ಮಕ್ಕಳ ದಾರುಣ ಸಾವು!

mandya news
08/04/2021

ಮಂಡ್ಯ: ಕೃಷಿ ಹೊಂಡಕ್ಕೆ ಬಿದ್ದು ಮೂವರು ಮಕ್ಕಳು ಮೃತಪಟ್ಟ ದಾರುಣ ಘಟನೆ ಮಂಡ್ಯದ ಪಾಂಡವಪುರದಲ್ಲಿ ವರದಿಯಾಗಿದೆ.

ಒಂದೇ ಕುಟುಂಬದ ಇಬ್ಬರು ಮಕ್ಕಳು ಹಾಗೂ ಮತ್ತೊಬ್ಬ ಬಾಲಕ ಈಜಲು ಕೃಷಿ ಹೊಂಡಕ್ಕೆ ತೆರಳಿದ್ದರು. ಪಾಂಡವಪುರ ತಾಲ್ಲೂಕಿನ ಬಳ್ಳೇಅತ್ತಿಗುಪ್ಪೆ ಗ್ರಾಮದಲ್ಲಿ ಘಟನೆ ನಡೆದಿದೆ.

ಮಹದೇವಪ್ಪ ಅವರ ಇಬ್ಬರು ಪುತ್ರರಾದ ಚಂದನ್ ಮತ್ತು ಕಾರ್ತಿಕ್ ಹಾಗೂ ಮಲ್ಲಿಕಾರ್ಜುನ್ ಅವರ ಮಗ ರೀತೇಶ್ ಸಾವನ್ನಪ್ಪಿದವರು. ಪಾಂಡವಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ