ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಮೂವರು ಪ್ರಮುಖ ಆರೋಪಿಗಳಿಗೆ ನ್ಯಾಯಾಂಗ ಬಂಧನ - Mahanayaka
11:45 AM Thursday 11 - September 2025

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಮೂವರು ಪ್ರಮುಖ ಆರೋಪಿಗಳಿಗೆ ನ್ಯಾಯಾಂಗ ಬಂಧನ

praveen nettaru
17/08/2022

ದಕ್ಷಿಣ ಕನ್ನಡ ‌ಜಿಲ್ಲೆಯ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾಗಿ ಪೊಲೀಸ್ ಕಸ್ಟಡಿಯಲ್ಲಿದ್ದ ಮೂವರು ಪ್ರಮುಖ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.


Provided by

ಪೊಲೀಸ್ ಕಸ್ಟಡಿಯಲ್ಲಿದ್ದ ಪ್ರಕರಣದ ಪ್ರಮುಖ ಆರೋಪಿಗಳಾದ ಶಿಯಾಬುದ್ದೀನ್, ರಿಯಾಝ್, ಬಶೀರ್ ಎಂಬವರ ಪೊಲೀಸ್ ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ನ್ಯಾಯಾಲಯಕ್ಕೆ ಹಾಜರು ಪಡಿಸಿದಾಗ ಆಗಸ್ಟ್ 24ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ನೀಡಿದೆ.

ಆಗಸ್ಟ್ 11ರಂದು ಬಂಧಿಸಲಾದ ಇವರನ್ನು ಸುಳ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ತನಿಖೆಗಾಗಿ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ನೀಡುವಂತೆ ಪೊಲೀಸ್ ಅಧಿಕಾರಿಗಳು ಮನವಿ ಸಲ್ಲಿಸಿದ್ದರು. ಮನವಿ ಪುರಸ್ಕರಿಸಿದ ನ್ಯಾಯಾಲಯವು ಆರೋಪಿಗಳನ್ನು 5 ದಿನ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ನೀಡಿತ್ತು.

ಪೊಲೀಸರು ಆರೋಪಿಗಳನ್ನು ಕಸ್ಟಡಿಗೆ ಪಡೆದು ಪ್ರಕರಣದ ಬಗ್ಗೆ ಹೆಚ್ಚಿನ ತನಿಖೆಗೆ ಒಳಪಡಿಸಲಾಗಿದೆ ಎಂದು ತಿಳಿದು ಬಂದಿದೆ. ಮಂಗಳವಾರ ಕಸ್ಟಡಿ ಅವಧಿ ಮುಗಿದ ಹಿನ್ನಲೆಯಲ್ಲಿ ಮತ್ತೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ