'ನನ್ನ ಹೆಸರು ಅರವಿಂದ್ ಕೇಜ್ರಿವಾಲ್..ನಾನು ಭಯೋತ್ಪಾದಕನಲ್ಲ' ಎಂದ ದಿಲ್ಲಿ ಸಿಎಂ - Mahanayaka
10:21 PM Thursday 11 - December 2025

‘ನನ್ನ ಹೆಸರು ಅರವಿಂದ್ ಕೇಜ್ರಿವಾಲ್..ನಾನು ಭಯೋತ್ಪಾದಕನಲ್ಲ’ ಎಂದ ದಿಲ್ಲಿ ಸಿಎಂ

16/04/2024

ಅಬಕಾರಿ ನೀತಿಯ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ದೆಹಲಿಯ ತಿಹಾರಿ ಜೈಲಿನಿಂದ ‘ನನ್ನ ಹೆಸರು ಅರವಿಂದ್ ಕೇಜ್ರಿವಾಲ್, ನಾನು ಭಯೋತ್ಪಾದಕನಲ್ಲ’ ಸಂದೇಶ ಕಳಿಸಿದ್ದಾರೆ ಎಂದು ಎಎಪಿಯ ಸಂಸದ ಸಂಜಯ್‌ ಸಿಂಗ್ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ. ಅರವಿಂದ್ ಕೇಜ್ರಿವಾಲ್ ರ ಮನೋಸ್ಥೈರ್ಯ ಕುಗ್ಗಿಸುವ ಪ್ರಯತ್ನ ನಡೆಸಲಾಗುತ್ತಿದೆ. ಅವರನ್ನು ಭಯೋತ್ಪಾದಕರಂತೆ ಕಾಣುತ್ತಿದ್ದು ಹತ್ತಿರದವರನ್ನು ಭೇಟಿಯಾಗಲು ಬಿಡುತ್ತಿಲ್ಲ. ಕೇಜ್ರಿವಾಲ್ ಹೊರಗೆ ಬಂದ ನಂತರ ಮತ್ತಷ್ಟು ಪ್ರಬಲರಾಗುತ್ತಾರೆ” ಎಂದು ಹೇಳಿದರು.

“ಅರವಿಂದ್ ಕೇಜ್ರಿವಾಲ್ ದೆಹಲಿ ಜನರು ಹಾಗೂ ದೇಶಕ್ಕಾಗಿ ಪುತ್ರ ಹಾಗೂ ಸೋದರನ ರೀತಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ‘ನನ್ನ ಹೆಸರು ಅರವಿಂದ್ ಕೇಜ್ರಿವಾಲ್, ನಾನು ಭಯೋತ್ಪಾದಕನಲ್ಲ’ ಎಂಬ ಸಂದೇಶವನ್ನು ಜೈಲಿನಿಂದ ಕಳಿಸಿದ್ದಾರೆ ಎಂದು ಸಂಜಯ್ ಸಿಂಗ್ ತಿಳಿಸಿದ್ದಾರೆ.

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ