ನನ್ನ ವಾಹನಕ್ಕೆ ಜೀರೋ ಟ್ರಾಫಿಕ್ ಸೌಲಭ್ಯ ಬೇಡ, ಹಾರ-ತುರಾಯಿ, ಶಾಲು—ಶಲ್ಯ ಬೇಡ: ಸಿಎಂ ಸಿದ್ದರಾಮಯ್ಯ - Mahanayaka
4:28 PM Monday 15 - September 2025

ನನ್ನ ವಾಹನಕ್ಕೆ ಜೀರೋ ಟ್ರಾಫಿಕ್ ಸೌಲಭ್ಯ ಬೇಡ, ಹಾರ–ತುರಾಯಿ, ಶಾಲು—ಶಲ್ಯ ಬೇಡ: ಸಿಎಂ ಸಿದ್ದರಾಮಯ್ಯ

siddaramaiah
21/05/2023

ನನ್ನ ವಾಹನ ಸಂಚಾರಕ್ಕೆ ನೀಡಲಾಗಿರುವ ಜೀರೋ ಟ್ರಾಫಿಕ್ ಸೌಲಭ್ಯವನ್ನು ಹಿಂದಕ್ಕೆ ಪಡೆಯುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ತಿಳಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.


Provided by

ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ನೀಡಿರುವ ಅವರು, ಜೀರೊ ಟ್ರಾಪಿಕ್‌ನಿಂದಾಗಿ ರಸ್ತೆಯಲ್ಲಿ ವಾಹನ ದಟ್ಟಣೆ ಉಂಟಾಗಿ ಸಾರ್ವಜನಿಕರಿಗೆ ಅನಾನುಕೂಲವಾಗುತ್ತಿರುವುದನ್ನು ಕಂಡು ಈ ನಿರ್ಧಾರ ಕೈಗೊಂಡಿದ್ದೇನೆ ಎಂದು ಹೇಳಿದ್ದಾರೆ.

ಇನ್ನೂ ನಾಳೆಯಿಂದ ಸಾರ್ವಜನಿಕರಿಂದ ಗೌರವ-ಸನ್ಮಾನದ ರೂಪದಲ್ಲಿ ಹಾರ-ತುರಾಯಿ, ಶಾಲು-ಶಲ್ಯಗಳನ್ನು ಸ್ವೀಕರಿಸದೆ ಇರಲು ನಿರ್ಧರಿಸಿದ್ದೇನೆ. ಇದು ನನ್ನ ಮನೆ-ಕಚೇರಿ ಮತ್ತು ಸಾರ್ವಜನಿಕ ಸಮಾರಂಭಗಳಿಗೂ ಅನ್ವಯ. ಪ್ರೀತಿ-ಗೌರವವನ್ನು ಕಾಣಿಕೆಗಳ ಮೂಲಕವೇ ಸಲ್ಲಿಸಬೇಕೆನ್ನುವವರು ಪುಸ್ತಕಗಳನ್ನು ನೀಡಬಹುದು. ನಿಮ್ಮೆಲ್ಲರ ಪ್ರೀತಿ–ಅಭಿಮಾನ ಸದಾ ನನ್ನ ಮೇಲಿರಲಿ ಎಂದು ಅವರು ತಿಳಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ