ಲಾಡ್ಜ್ ನಲ್ಲಿ ಮಹಿಳೆಯ ಕಗ್ಗೊಲೆ: ಕೊಲೆ ಮಾಡಿ ಮೊಬೈಲ್ ಬ್ಲಾಸ್ಟ್ ಆಯ್ತು ಎಂದ ಪ್ರಿಯಕರ! - Mahanayaka

ಲಾಡ್ಜ್ ನಲ್ಲಿ ಮಹಿಳೆಯ ಕಗ್ಗೊಲೆ: ಕೊಲೆ ಮಾಡಿ ಮೊಬೈಲ್ ಬ್ಲಾಸ್ಟ್ ಆಯ್ತು ಎಂದ ಪ್ರಿಯಕರ!

mysore
26/08/2025

ಮೈಸೂರು: ಪ್ರಿಯಕರನೊಬ್ಬ ವಿವಾಹಿತ ಮಹಿಳೆಯ ಬಾಯಿಗೆ ಜಿಲೆಟಿನ್ ಕಡ್ಡಿ ಇರಿಸಿ ಸ್ಫೋಟಿಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ಮೈಸೂರಿನ ಸಾಲಿಗ್ರಾಮ ತಾಲ್ಲೂಕಿನ ಭೇರ್ಯ ಗ್ರಾಮದಲ್ಲಿರುವ ಲಾಡ್ಜ್‌ ಆರೋಪಿ ಈ ಕೃತ್ಯ ಎಸಗಿದ್ದು, ಗೆರಸನಹಳ್ಳಿ ಗ್ರಾಮದ ರಕ್ಷಿತಾ (20) ಎಂಬಾಕೆ ಕೊಲೆಯಾದ ಮಹಿಳೆಯಾಗಿದ್ದಾಳೆ. ಬಿಳಿಕೆರೆ ಗ್ರಾಮದ ಸಿದ್ಧರಾಜು ಎಂಬಾತ ಹತ್ಯೆ ನಡೆಸಿದ ಆರೋಪಿಯಾಗಿದ್ದಾನೆ.

ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಗೆರಸನಹಳ್ಳಿಯ ನಿವಾಸಿ 20 ವರ್ಷದ ರಕ್ಷಿತಾ ಕೇರಳದ ಸುಭಾಷ್ ಎಂಬಾತನೊಂದಿಗೆ ವಿವಾಹವಾಗಿದ್ದಳು. ಈ ದಂಪತಿಗೆ 2 ವರ್ಷದ ಮಗು ಕೂಡ ಇದೆ‌.‌


Provided by
Provided by
Provided by
Provided by
Provided by
Provided by
Provided by
Provided by
Provided by
Provided by
Provided by

ಈಕೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರದ ಸಿದ್ದರಾಜು ಜೊತೆಗಿನ ವಿವಾಹಪೂರ್ವ ಪ್ರೇಮಾಕುಂರ ಮದುವೆಯಾದ ಬಳಿಕವೂ ಮುಂದುವರೆದಿತ್ತು ಎನ್ನಲಾಗಿದೆ. ಸಿದ್ದರಾಜು ಮೃತ ರಕ್ಷಿತಾಗೆ ಹತ್ತಿರದ ಸಂಬಂಧಿ. ಮದುವೆಗೂ ಮುನ್ನ ಈ ಸಿದ್ದರಾಜು ಮೃತ ರಕ್ಷಿತಾಳನ್ನ ಮದುವೆಯಾಗಬೇಕು ಎಂದುಕೊಂಡಿದ್ದ. ಆದರೆ ಮನೆಯವರು ಕೇರಳದ ಯುವಕನ ಜೊತೆ ಮದುವೆ ಮಾಡಿದ್ದರು.

ಆದರೆ, ಮದುವೆಯಾದ ಬಳಿಕವೂ ಈ ಸಂಬಂಧ ಮುಂದುವೆರೆದಿತ್ತು. ಕೇರಳದಿಂದ ತವರು ಮನೆಗೆ ಬಂದ ರಕ್ಷಿತಾ ಪ್ರಿಯಕರ ಸಿದ್ದರಾಜು ಜೊತೆ ಸುತ್ತಾಟ ನಡೆಸುತ್ತಿದ್ದಳು. ಕಳೆದ ಶುಕ್ರವಾರ ಮಗುವನ್ನ ಬಿಟ್ಟು ಕೇರಳದಲ್ಲಿ ಅತ್ತೆಗೆ ಹುಷಾರಿಲ್ಲ ಎಂದು ಸುಳ್ಳು ಹೇಳಿ ಮನೆಯಿಂದ ಹೋಗಿದ್ದಾಳೆ. ಬಳಿಕ ಪ್ರಿಯಕರ ಸಿದ್ದರಾಜು ಜೊತೆ ಕೆ.ಆರ್. ನಗರದ ಕಪ್ಪಡಿ ಕ್ಷೇತ್ರದ ದೇವಸ್ಥಾನಕ್ಕೆ ಹೋಗಿದ್ದಾರೆ. ಬಳಿಕ ಸಾಲಿಗ್ರಾಮ ತಾಲೂಕಿನ ಭೇರ್ಯ ಗ್ರಾಮದಲ್ಲಿರುವ ಎಸ್ ಜಿ ಅರ್ ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ ರೂಮ್ ಪಡೆದು ಉಳಿದು ಕೊಂಡಿದ್ದಾರೆ.

ಲಾಡ್ಜ್ ನಲ್ಲಿ ಇಬ್ಬರ ನಡುವೆ ಗಲಾಟೆಯಾಗಿದೆ. ಸಿದ್ದರಾಜು ಮೊದಲೇ ಪ್ಲಾನ್ ಮಾಡಿದ್ದಂತೆ ಜಿಲೆಟಿನ್ ಕಡ್ಡಿಯನ್ನ ಬಾಯಿಗೆ ಇಟ್ಟು ಸ್ಫೋಟ ಮಾಡಿದ್ದಾನೆ. ಪರಿಣಾಮ ಸ್ಫೋಟದ ತೀವ್ರತೆಗೆ ರಕ್ಷಿತಾಳ ಮುಖ ಛಿದ್ರವಾಗಿದ್ದು, ಲಾಡ್ಜ್ ಸಿಬ್ಬಂದಿ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ‌ಬಳಿಕ ಮೊಬೈಲ್ ಬ್ಲಾಸ್ಟ್ ಎಂದು ಕಥೆ ಕಟ್ಟಿದ್ದಾನೆ. ಇನ್ನು ವಿಚಾರ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಬಂದ ಪೊಲೀಸರು ವಿಚಾರಣೆ ಮಾಡಿದ ಮೇಲೆ ಕೊಲೆ ರಹಸ್ಯ ಬೆಳಕಿಗೆ ಬಂದಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ