ಬಾನು ಮುಷ್ತಾಕ್ ಅವರಿಗೆ ದಸರಾ ಉದ್ಘಾಟನೆಗೆ ಆಹ್ವಾನ ನೀಡಿದ ಮೈಸೂರು ಜಿಲ್ಲಾಡಳಿತ

ಹಾಸನ: ಈ ಬಾರಿಯ ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತೆ, ಕನ್ನಡ ಸಾಹಿತಿಗಳಾದ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಲಾಗಿದೆ. ಇದೇ ಸಂದರ್ಭದಲ್ಲಿ ಮೈಸೂರು ಜಿಲ್ಲಾಡಳಿತವು ಬಾನು ಮುಷ್ತಾಕ್ ಅವರಿಗೆ ಆಹ್ವಾನ ನೀಡಿದೆ.
ಮೈಸೂರು ಜಿಲ್ಲಾಧಿಕಾರಿ ಜಿ. ಲಕ್ಷ್ಮಿಕಾಂತ್ ರೆಡ್ಡಿ ಅವರ ನೇತೃತ್ವದಲ್ಲಿ ಜಿಲ್ಲಾಡಳಿತದ ತಂಡವು ಹಾಸನದ ಪೆನ್ಷನ್ ಮಹಲ್ ಬಡಾವಣೆಯಲ್ಲಿರುವ ಬಾನು ಮುಷ್ತಾಕ್ ಅವರ ಮನೆಗೆ ಭೇಟಿ ನೀಡಿತು. ಈ ಭೇಟಿಯ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳ ಜೊತೆಗೆ ಉಪ ಜಿಲ್ಲಾಧಿಕಾರಿ ಶಿವರಾಜ್ ಮತ್ತು ಇತರ ಅಧಿಕಾರಿಗಳು ಉಪಸ್ಥಿತರಿದ್ದರು.
ಇದೇ ವೇಳೆ ಬಾನು ಮುಷ್ತಾಕ್ ಮತ್ತು ಅವರ ಕುಟುಂಬಸ್ಥರೊಂದಿಗೆ ಸೌಹಾರ್ದಯುತವಾಗಿ ಮಾತನಾಡಿ, ದಸರಾ ಉದ್ಘಾಟನೆಗೆ ಆಮಂತ್ರಣ ಪತ್ರವನ್ನು ಸಮರ್ಪಿಸಿದರು.
ಮೈಸೂರು ದಸರಾ, ಕರ್ನಾಟಕದ ನಾಡಹಬ್ಬವಾಗಿ, ಎಲ್ಲಾ ಧರ್ಮ, ಜಾತಿಗಳನ್ನು ಒಳಗೊಂಡ ಸಾಂಸ್ಕೃತಿಕ ಉತ್ಸವವಾಗಿದೆ. ಬಾನು ಮುಷ್ತಾಕ್ ಅವರಂತಹ ಪ್ರತಿಭಾವಂತ ಸಾಹಿತಿಯನ್ನು ಆಹ್ವಾನಿಸುವ ಮೂಲಕ ಜಿಲ್ಲಾಡಳಿತವು ಕನ್ನಡ ಸಾಹಿತ್ಯಕ್ಕೆ ಮಾನ್ಯತೆ ನೀಡಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD