ಮೈಸೂರಿನಲ್ಲಿ ಬಾಲಕಿಯ ಅತ್ಯಾಚಾರ ಕೊಲೆ ಪ್ರಕರಣ: ಆರೋಪಿಯನ್ನು ಪತ್ತೆ ಹಚ್ಚಿದ ಪೊಲೀಸರು - Mahanayaka

ಮೈಸೂರಿನಲ್ಲಿ ಬಾಲಕಿಯ ಅತ್ಯಾಚಾರ ಕೊಲೆ ಪ್ರಕರಣ: ಆರೋಪಿಯನ್ನು ಪತ್ತೆ ಹಚ್ಚಿದ ಪೊಲೀಸರು

mysore case
09/10/2025

ಮೈಸೂರು: ಮೈಸೂರು ದಸರಾ ವಸ್ತು ಪ್ರದರ್ಶನ ಮೈದಾನದಲ್ಲಿ ಬಲೂನ್ ಮಾರಲು ಬಂದಿದ್ದ ಬಾಲಕಿಯ ಶವ ಪತ್ತೆ ಪ್ರಕರಣದ ಆರೋಪಿಯನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ ಎಂದು ತಿಳಿದು ಬಂದಿದೆ.


Provided by

ದೊಡ್ಡಕೆರೆ ಮೈದಾನದ ಸುತ್ತಮುತ್ತಲಿನ ರಸ್ತೆಯಲ್ಲಿ ದಸರಾ ವ್ಯಾಪಾರಕ್ಕಾಗಿ ವ್ಯಾಪಾರಿಗಳು ಬಂದು ನೆಲೆಸಿದ್ದರು. ಬುಧವಾರ ಚಾಮುಂಡೇಶ್ವರಿ ದೇವಾಲಯದ ತೆಪ್ಪೋತ್ಸವ ಮುಗಿಸಿ, ಗುರುವಾರ ಬೇರೆಡೆಗೆ ತೆರಳಲು ಸಿದ್ಧತೆ ನಡೆಸಿದ್ದರು.  ರಾತ್ರಿ ವ್ಯಾಪಾರ ಮುಗಿಸಿ ಬಂದಿದ್ದ ಗುಲ್ಬರ್ಗಾ ಮೂಲದ ಸುಮಾರು 10ರಿಂದ 12 ವರ್ಷದ ಬಾಲಕಿ ತಂದೆ ತಾಯಿಯೊಂದಿಗೆ ಮಲಗಿದ್ದಳು. ಮುಂಜಾನೆ ಮಳೆ ಬಂದ ವೇಳೆ ಎಲ್ಲರೂ ಎದ್ದಿದ್ದರು. ಈ ವೇಳೆ ಬಾಲಕಿ ನಾಪತ್ತೆಯಾಗಿರುವುದು ಗೊತ್ತಾಗಿದೆ.  ಬಳಿಕ ಹುಡುಕಾಟ ನಡೆಸಿದ ವೇಳೆ ಟೆಂಟ್ ನಿಂದ 50 ಮೀ. ದೂರದಲ್ಲಿರುವ ಮಣ್ಣಿನ ರಾಶಿ ಬಳಿ ಬಾಲಕಿಯ ಶವ ಪತ್ತೆಯಾಗಿದ್ದು, ಅತ್ಯಾಚಾರ ನಡೆಸಿ ಹತ್ಯೆ ನಡೆಸಿರುವ ಶಂಕೆ ವ್ಯಕ್ತವಾಗಿತ್ತು.

ಇನ್ನೂ ಬಾಲಕಿಯ ಶವ ಪತ್ತೆಯಾಗುತ್ತಿದ್ದಂತೆಯೇ ಕಾರ್ಯಪ್ರವೃತ್ತರಾದ ಪೊಲೀಸರು ಆರೋಪಿಯ ಪತ್ತೆಗಾಗಿ ಶೋಧ ಆರಂಭಿಸಿದ್ದರು.  ವರದಿಗಳ ಪ್ರಕಾರ, ಸಿದ್ದಲಿಂಗಪುರ ನಿವಾಸಿ ಕಾರ್ತಿಕ್ (31) ಕೊಲೆ ಆರೋಪಿ ಎಂದು ಹೇಳಲಾಗಿದೆ. ಈತ ಕಳೆದ ನಾಲ್ಕು ತಿಂಗಳ ಹಿಂದೆಯಷ್ಟೇ ಜೈಲಿನಿಂದ ಹೊರ ಬಂದಿದ್ದ. ಮದ್ಯ ಸೇವಿಸಿ ಎಲ್ಲೆಂದರಲ್ಲಿ ಅಲೆಯುತ್ತಿದ್ದ ಎಂದು ತಿಳಿದು ಬಂದಿದ್ದ. ಸಿಸಿ ಕ್ಯಾಮರಾ ದೃಶ್ಯಾವಳಿಯನ್ನು  ಆಧರಿಸಿ ಆರೋಪಿಯನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ತಿಳಿದು ಬಂದಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ