ಮೈಸೂರು: ಸಾಮೂಹಿಕ ಅತ್ಯಾಚಾರ ಪ್ರಕರಣ | ಸಂತ್ರಸ್ತೆ, ಪೋಷಕರು ತನಿಖೆಗೆ ಸಹಕಾರ ನೀಡುತ್ತಿಲ್ಲ- ಎಸ್.ಟಿ.ಸೋಮಶೇಖರ್

ಚಾಮರಾಜನಗರ: ಮೈಸೂರಿನಲ್ಲಿ ವಿದ್ಯಾರ್ಥಿನಿಯ ಮೇಲೆ ಗ್ಯಾಂಗ್ ರೇಪ್ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆ ಸಹಕಾರ ನೀಡುತ್ತಿಲ್ಲ ಎಂದು ಪೊಲೀಸರು ಹೇಳಿದ್ದಾರೆ. ಸಂತ್ರಸ್ತೆ ಪೊಲೀಸರ ತನಿಖೆಗೆ ಸಹಕಾರ ನೀಡಬೇಕಾಗುತ್ತದೆ ಎಂದು ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಸುತ್ತೂರಿನಲ್ಲಿ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.
ಈ ಪ್ರಕರಣವನ್ನು ಎಲ್ಲ ಆಯಾಮಗಳಲ್ಲಿಯೂ ತನಿಖೆ ನಡೆಸಲಾಗುತ್ತಿದೆ. ಸಂತ್ರಸ್ತೆಯ ಪೋಷಕರು ಯಾರನ್ನೂ ಭೇಟಿಯಾಗುವುದಿಲ್ಲ ಎಂದು ಹೇಳಿದ್ದಾರೆ. ಹಾಗೆಯೇ ಸಂತ್ರಸ್ತೆ ಕೂಡ ಯಾರನ್ನೂ ಭೇಟಿಯಾಗುವುದಿಲ್ಲ ಎಂದು ಪೋಷಕರು ಪತ್ರವನ್ನು ನೀಡಿದ್ದಾರೆ ಎಂದು ಅವರು ತಿಳಿಸಿದರು.
ಪ್ರಕರಣವನ್ನು ಮುಖ್ಯಮಂತ್ರಿಗಳು ಎಡಿಜಿಪಿ ಪ್ರತಾಪ್ ರೆಡ್ಡಿ ನೇತೃತ್ವದಲ್ಲಿ ತನಿಖೆ ನಡೆಸುತ್ತಿದ್ದಾರೆ. ಕಳೆದ ಮೂರು ದಿನಗಳಿಂದ ಪ್ರಕರಣವನ್ನು ಗಂಭೀರವಾಗಿ ತನಿಖೆ ಮಾಡಲಾಗುತ್ತಿದೆ. ಆರೋಪಿಗಳ ಪತ್ತೆಗೆ ನಾನಾ ಆಯಾಮಗಳಲ್ಲಿ ತನಿಖೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದರು.
ಇನ್ನಷ್ಟು ಸುದ್ದಿಗಳು…
ಆ ಹುಡುಗಿ ಅಷ್ಟೊತ್ತಿಗೆ ಅಲ್ಲಿಗೆ ಏಕೆ ಹೋಗಿದ್ದಳೋ? | ಗ್ಯಾಂಗ್ ರೇಪ್ ಬಗ್ಗೆ ಮಂಜುಳಾ ಮಾನಸ ಉಡಾಫೆ ಮಾತುಗಳು
ಕಾಬುಲ್ ವಿಮಾನ ನಿಲ್ದಾಣದಲ್ಲಿ ಭಾರೀ ಸ್ಫೋಟ | ಸಾಕಷ್ಟು ಜನರು ಅಪಾಯಕ್ಕೆ ಸಿಲುಕಿರುವ ಶಂಕೆ
ಕಾನೂನು ಸುವ್ಯವಸ್ಥೆ ಹತೋಟಿಗೆ ಬರಲಿ ಎಂದು ಚಾಮುಂಡಿಯನ್ನು ಬೇಡಿದ್ದೇನೆ ಎಂದ ಗೃಹ ಸಚಿವ ಅರಗ ಜ್ಞಾನೇಂದ್ರ!
ಪರಿಶಿಷ್ಟ ಜಾತಿಯ ಯುವಕನಿಗೆ ಮೂತ್ರ ಕುಡಿಸಿದ ಪ್ರಕರಣ | ಆರೋಪಿ ಪಿಎಸ್ ಐ ಅರ್ಜುನ್ ಜಾಮೀನು ಅರ್ಜಿ ವಜಾ
ಗೃಹ ಸಚಿವರನ್ನು ರೇಪ್ ಮಾಡಿದ ಕಾಂಗ್ರೆಸ್ ನಾಯಕರ ಮೇಲೆ ಕೇಸ್ ಮಾಡಿ | ಡಿ.ಕೆ.ಶಿವಕುಮಾರ್ ಲೇವಡಿ
ಬ್ರೇಕಿಂಗ್ ನ್ಯೂಸ್: ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣ: ಮೂವರು ಶಂಕಿತ ಆರೋಪಿಗಳ ಬಂಧನ
ದಂತ ವೈದ್ಯನ ಕೈಯಿಂದ ಜಾರಿದ ಸ್ಕ್ರೂ ವೃದ್ಧನ ಶ್ವಾಸಕೋಶ ಸೇರಿತು | ಮುಂದೆ ನಡೆದದ್ದೇನು ಗೊತ್ತಾ?
Disclaimer:
www.mahanayaka.in ಅಂತರ್ಜಾಲ ಮಾಧ್ಯಮದಲ್ಲಿ ಪ್ರಕಟವಾದ ಸುದ್ದಿಗಳಲ್ಲಿ ಯಾರದ್ದೇ ಭಾವನೆಗಳಿಗೆ ಧಕ್ಕೆಯಾಗುವಂತಹ ಅಥವಾ ನೋವುಂಟಾಗುವಂತಹ ಅಥವಾ ನಿಮಗೆ ಆಕ್ಷೇಪಾರ್ಹ ಎನಿಸಿದಂತಹ ಅಂಶಗಳ ಬಗ್ಗೆ ಓದುಗರು 9686872149 ನಂಬರ್ ಗೆ ಸುದ್ದಿಯ ಲಿಂಕ್ ಸಹಿತ ನಿಮ್ಮ ದೂರು ಸಲಹೆಗಳನ್ನು ವಾಟ್ಸಾಪ್ ಮಾಡಬಹುದು. ಅಥವಾ ಕರೆ ಮಾಡಬಹುದು. ನಿಮ್ಮ ದೂರನ್ನು ಪರಿಶೀಲಿಸಿ, ಅಂತಹ ಆಕ್ಷೇಪಾರ್ಹ ಅಂಶಗಳನ್ನು ತೆಗೆದು ಹಾಕಲು ಮಾಧ್ಯಮವು ಬದ್ಧವಾಗಿದೆ.