12:52 AM Saturday 13 - December 2025

ಮೈಸೂರು ಜಿಲ್ಲಾ ಗ್ರಾ.ಪಂ.ಗಳಲ್ಲಿ ದ್ವಿತೀಯ ಪಿಯುಸಿ ಪಾಸಾದವರಿಗೆ ಹಲವು ಹುದ್ದೆಗಳ ನೇಮಕಾತಿ : ಉಚಿತವಾಗಿ ಅರ್ಜಿ ಸಲ್ಲಿಸಿ

job
07/10/2024

Mysore Zilla Panchayat Recruitment 2024 : ಮೈಸೂರು ಜಿಲ್ಲಾ ಪಂಚಾಯಿತಿಯ ವ್ಯಾಪ್ತಿಯಲ್ಲಿ ಬರುವ ವಿವಿಧ ಗ್ರಾಮ ಪಂಚಾಯಿತಿಗಳ, ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗಳ ನೇಮಕಾತಿಗಾಗಿ ಮೈಸೂರು ಜಿಲ್ಲಾ ಪಂಚಾಯಿತಿಯು ಅಧಿಕೃತ ಅಧಿಸೂಚನೆ ಹೊರಡಿಸಿದೆ.

ಮೈಸೂರು ಜಿಲ್ಲೆಯಾದ್ಯಂತ ಒಟ್ಟು 19 ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅರ್ಜಿ ಕರೆಯಲಾಗಿದ್ದು, ನೇಮಕಾತಿಗಾಗಿ ಅರ್ಜಿ ಸಲ್ಲಿಸಲು ಇರಬೇಕಾದ ಸಂಪೂರ್ಣ ಅರ್ಹತೆಗಳು ಮತ್ತು ಇತರೆ ನೇಮಕಾತಿಯ ಸಂಪೂರ್ಣ ವಿವರವನ್ನು ಕೆಳಗೆ ನೀಡಲಾಗಿದೆ ಅರ್ಜಿ ಸಲ್ಲಿಸುವವರು ಈ ಒಂದು ಮಾಹಿತಿಯನ್ನು ತಿಳಿದುಕೊಂಡು ನಂತರ ಅರ್ಜಿ ಸಲ್ಲಿಸಿರಿ.

ಹುದ್ದೆಗಳ ವಿವರ :

ಮೈಸೂರು ಜಿಲ್ಲೆಯಾದ್ಯಂತ ಒಟ್ಟು 19 ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಮೇಲ್ವಿಚಾರಕರ ಹುದ್ದೆಗಳು ಖಾಲಿ ಇವೆ.

ಅರ್ಜಿ ಸಲ್ಲಿಸಲು ನಿಗದಿಪಡಿಸಲಾದ ಶೈಕ್ಷಣಿಕ ಅರ್ಹತೆಗಳೇನು?

ಮೈಸೂರು ಜಿಲ್ಲಾ ಪಂಚಾಯತಿಯ ವ್ಯಾಪ್ತಿ ಅಡಿಯಲ್ಲಿ ಬರುವ ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಶಿಕ್ಷಣ ಮಂಡಳಿಯಿಂದ 12ನೇ ತರಗತಿ ಪಾಸ್ ಆಗಿರಬೇಕು ಮತ್ತು ಅದರ ಜೊತೆಗೆ ಸರ್ಟಿಫಿಕೇಟ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ನ ಪ್ರಮಾಣ ಪತ್ರ ಹೊಂದಿರಬೇಕು.

ವಯೋಮಿತಿ ಅರ್ಹತೆಗಳೇನು?

ಸಲ್ಲಿಸುವವರು ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ ವಯೋಮಿತಿಯು 35 ವರ್ಷಕ್ಕೆ ನಿಗದಿಪಡಿಸಲಾಗಿದೆ. ಒಂದು ವೇಳೆ ನೀವು ಮೀಸಲಾತಿ ವ್ಯಾಪ್ತಿಯ ವರ್ಗಗಳ ಅಡಿಯಲ್ಲಿ ಬರುವುದಾದರೆ ನಿಮಗೆ ಗರಿಷ್ಠ ವಯೋಮಿತಿಯಲ್ಲಿ ನೇಮಕಾತಿ ನಿಯಮಗಳ ಪ್ರಕಾರ ವಯೋಮಿತಿ ಸಡಲಿಕೆ ನೀಡಲಾಗುತ್ತದೆ.

ಅರ್ಜಿ ಶುಲ್ಕವೇಷ್ಟು?

ಮೊದಲೇ ತಿಳಿಸಿದ ಹಾಗೆ ಈ ನೇಮಕಾತಿಗಾಗಿ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಯಾವುದೇ ರೀತಿಯ ಅರ್ಜಿ ಶುಲ್ಕ ಪಾವತಿಸಬೇಕಾಗಿಲ್ಲ ಉಚಿತವಾಗಿ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳ ಮಾಹಿತಿ :

*  ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಆರಂಭವಾದ ದಿನಾಂಕ: 03 ಅಕ್ಟೋಬರ್ 2024

*  ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 30 ಅಕ್ಟೋಬರ್ 2024

ಅರ್ಜಿ ಸಲ್ಲಿಸಲು ಅಧಿಕೃತ ಜಾಲತಾಣದ ಲಿಂಕ್ : mysore.nic.in


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ

Exit mobile version