ಮಂಗಳೂರು: ಚಲಿಸುತ್ತಿದ್ದ ಆಟೋದಲ್ಲಿ ನಿಗೂಢ ಸ್ಪೋಟ: ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆ
ಮಂಗಳೂರು: ಚಲಿಸುತ್ತಿದ್ದ ಆಟೋವೊಂದರಲ್ಲಿ ನಿಗೂಢ ಸ್ಫೋಟ ಸಂಭವಿಸಿದ ಘಟನೆ ನಗರದ ಕಂಕನಾಡಿ ಪೊಲೀಸ್ ಠಾಣೆಯ ಬಳಿ ನಡೆದಿದ್ದು, ಘಟನೆ ಸಂಬಂಧ ಸ್ಥಳಕ್ಕೆ ವಿಧಿ ವಿಜ್ಞಾನ ಇಲಾಖೆಯ ತಜ್ಞರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಈ ಸಂಬಂಧ ಮಂಗಳೂರು ನಗರ ಪೊಲೀಸ್ ಕಮೀಷನರ್ ಎನ್.ಶಶಿಕುಮಾರ್ ಮಾಹಿತಿ ನೀಡಿದ್ದು, ಕಂಕನಾಡಿ ಪೊಲೀಸ್ ಠಾಣೆಯ ಬಳಿ ಈ ಘಟನೆ ನಡೆದಿದೆ. ನಾಗುರಿ ಎಂಬಲ್ಲಿಂದ ಪಂಪ್ ವೆಲ್ ಕಡೆ ಆಟೋ ಸಾಗುತಿತ್ತು. ಆಟೋಗೆ ನಾಗುರಿಯಿಂದ ಹತ್ತಿದ ಪ್ರಯಾಣಿಕನ ಕೈಯಲ್ಲಿದ್ದ ಪ್ಲ್ಯಾಸ್ಟಿಕ್ ಬ್ಯಾಗ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬ್ಯಾಗ್ ಹಿಡಿದುಕೊಂಡ ವ್ಯಕ್ತಿಗೂ ಬೆಂಕಿ ತಗುಲಿದೆ. ಬೆಂಕಿ ತಗುಲಿದ ಸಂದರ್ಭ ಅಟೋ ಒಳಭಾಗ ಸುಟ್ಟು ಹೋಗಿದೆ. ಗಾಯಾಳುಗೆ ಪ್ರಥಮ ಚಿಕಿತ್ಸೆ ನೀಡಲಾಗಿದೆ ಎಂದು ಅವರು ತಿಳಿಸಿದರು.
ಈ ಬಗ್ಗೆ ಸಾರ್ವಜನಿಕರು ಆತಂಕಕ್ಕೊಳಗಾಗುವ ಅವಶ್ಯಕತೆ ಇಲ್ಲ, ಬ್ಲಾಸ್ಟ್ ಆದ ಬಗ್ಗೆ ಪ್ರತ್ಯಕ್ಷ ಸಾಕ್ಷಿಗಳ ಏನು ಹೇಳಿಲ್ಲ, ಸಮಗ್ರವಾದ ವಿಚಾರಣೆ ನಡೆಸಲಾಗುತ್ತದೆ ಎಂದು ತಿಳಿಸಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka