ಮಾಜಿ ಸಚಿವ ಎನ್.ಮಹೇಶ್ ಬೆಂಬಲಿಗನ ಮೇಲೆ ಹಲ್ಲೆ | ದೂರು ದಾಖಲು
ಕೊಳ್ಳೇಗಾಲ: ಮಾಜಿ ಸಚಿವ ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಅವರ ಬೆಂಬಲಿಗನ ಮೇಲೆ ಹಲ್ಲೆ ನಡೆದಿದ್ದು, ಈ ಸಂಬಂಧ ಹಲವರ ವಿರುದ್ಧ ದೂರು ದಾಖಲಾಗಿದೆ.
ಮಾಂಬಳ್ಳಿ ಗ್ರಾಮದ ಮಲ್ಲಿಕಾರ್ಜುನ ಹಲ್ಲೆಗೊಳಗಾದವರಾಗಿದ್ದಾರೆ. ಬಟ್ಟೆ ಖರೀದಿಸಲು ತೆರಳುತ್ತಿದ್ದ ಸಂದರ್ಭದಲ್ಲಿ ಇವರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಲಾಗಿದೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ ಎಂದು ವರದಿಯಾಗಿದೆ.
ಇನಾಯತ್ ಬೇಗ್, ಚೈನಾರಾಮ್ ಕಾಪ್ಡಿ, ರಂಗಸ್ವಾಮಿ, ಹನುಮಂತು ಎಂಬವರು ತನ್ನ ಮೇಲೆ ಹಲ್ಲೆ ನಡೆಸಿದ್ದು, “ನಿಮ್ಮ ಅಣ್ಣ(ಎನ್.ಮಹೇಶ್)ನಿಗೆ ಸರಿಯಾಗಿ ಮಂಗಳಾರತಿ ಎತ್ತಿದ್ದೇವೆ” ಎಂದು ಹೇಳಿದ್ದಲ್ಲದೇ ಜಾತಿ ನಿಂದನೆ ಮಾಡಿದ್ದಾರೆ ಎಂದು ಮಲ್ಲಿಕಾರ್ಜುನ ದೂರಿನಲ್ಲಿ ತಿಳಿಸಿದ್ದಾರೆ.
ಜ್ಯುವೆಲ್ಲರಿ ಬಳಿಯಲ್ಲಿ ಎನ್.ಮಹೇಶ್ ಅವರ ಬೆಂಬಲಿಗ ಮಲ್ಲಿಕಾರ್ಜುನ್ ಅವರನ್ನು ಅಡ್ಡಗಟ್ಟಿ ಕುತ್ತಿಗೆಪಟ್ಟಿ ಹಿಡಿದು, ಎದೆಗೆ, ಹೊಟ್ಟೆಗೆ ಕುತ್ತಿಗೆಗೆ ಬಲವಾಗಿ ಗುದ್ದಿ ಗಾಯಗೊಳಿಸಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
Disclaimer:
www.mahanayaka.in ಅಂತರ್ಜಾಲ ಮಾಧ್ಯಮದಲ್ಲಿ ಪ್ರಕಟವಾದ ಸುದ್ದಿಗಳಲ್ಲಿ ಯಾರದ್ದೇ ಭಾವನೆಗಳಿಗೆ ಧಕ್ಕೆಯಾಗುವಂತಹ ಅಥವಾ ನೋವುಂಟಾಗುವಂತಹ ಅಥವಾ ನಿಮಗೆ ಆಕ್ಷೇಪಾರ್ಹ ಎನಿಸಿದಂತಹ ಅಂಶಗಳ ಬಗ್ಗೆ ಓದುಗರು 9686872149 ನಂಬರ್ ಗೆ ಸುದ್ದಿಯ ಲಿಂಕ್ ಸಹಿತ ನಿಮ್ಮ ದೂರು ಸಲಹೆಗಳನ್ನು ವಾಟ್ಸಾಪ್ ಮಾಡಬಹುದು. ಅಥವಾ ಕರೆ ಮಾಡಬಹುದು. ನಿಮ್ಮ ದೂರನ್ನು ಪರಿಶೀಲಿಸಿ, ಅಂತಹ ಆಕ್ಷೇಪಾರ್ಹ ಅಂಶಗಳನ್ನು ತೆಗೆದು ಹಾಕಲು ಮಾಧ್ಯಮವು ಬದ್ಧವಾಗಿದೆ.