ವೀಣಾ ಧ್ರುವನಾರಾಯಣ್ ನಿಧನ ಹಿನ್ನೆಲೆ: ಧ್ರುವನಾರಾಯಣ್ ಕುಟುಂಬಕ್ಕೆ ಸಾಂತ್ವನ ಹೇಳಿದ ಎನ್.ಮಹೇಶ್ - Mahanayaka
2:07 AM Wednesday 27 - August 2025

ವೀಣಾ ಧ್ರುವನಾರಾಯಣ್ ನಿಧನ ಹಿನ್ನೆಲೆ: ಧ್ರುವನಾರಾಯಣ್ ಕುಟುಂಬಕ್ಕೆ ಸಾಂತ್ವನ ಹೇಳಿದ ಎನ್.ಮಹೇಶ್

n mahesh
08/04/2023


Provided by

ದಿ. ಆರ್.ಧ್ರುವನಾರಾಯಣ್ ಅವರ ಧರ್ಮ ಪತ್ನಿ ವೀಣಾ ಧ್ರುವನಾರಾಯಣ್ ನಿಧನರಾದ ಹಿನ್ನೆಲೆಯಲ್ಲಿ ಮಾಜಿ ಸಚಿವ, ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಅವರು, ಇಂದು ಹೆಗ್ಗವಾಡಿ ಗ್ರಾಮಕ್ಕೆ ಭೇಟಿ ನೀಡಿದರು.

ಇದೇ ವೇಳೆ ಧ್ರುವನಾರಾಯಣ್ ಅವರ ಪುತ್ರ ದರ್ಶನ್ ಧ್ರುವನಾರಾಯಣ್ ಅವರಿಗೆ ಸಾಂತ್ವನ ಹೇಳಿದರು. ಮೃತರ ಕುಟುಂಬಕ್ಕೆ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಾನ್ ಬುದ್ಧರು  ನೀಡಲಿ ಎಂದು ಅವರು ಪ್ರಾರ್ಥಿಸಿದರು.

ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ 20 ದಿನಗಳಿಂದಲೂ ಚಿಕಿತ್ಸೆ ಪಡೆಯುತ್ತಿದ್ದ ವೀಣಾ ಧ್ರುವನಾರಾಯಣ್ ಅವರು ಚಿಕಿತ್ಸೆ ಫಲಿಸದೇ ಶುಕ್ರವಾರ ನಿಧನರಾಗಿದ್ದರು. ಕಳೆದ 16 ವರ್ಷಗಳಿಂದಲೂ ಅನಾರೋಗ್ಯದಿಂದ ಬಳಲುತ್ತಿದ್ದ ವೀಣಾ ಅವರು ತಮ್ಮ ಪತಿಯ ನಿಧನದ ಬೆನ್ನಲ್ಲೇ ನಿಧನರಾಗಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ