10th ಪಾಸಾದವರಿಗೆ ಉದ್ಯೋಗಾವಕಾಶ : ದೇಶದ ಅತ್ತ್ಯುನ್ನತ ಬ್ಯಾಂಕ್ ನ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ
NABARD Office Attendant Recruitment : ಭಾರತ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ರಾಷ್ಟ್ರೀಯ ಬ್ಯಾಂಕ್ ನಲ್ಲಿ ಕಚೇರಿ ಸಹಾಯಕ ಹುದ್ದೆಗಳು ಖಾಲಿ ಇದ್ದು, ಈ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ನಬಾರ್ಡ್ ಬ್ಯಾಂಕ್ ಅಧಿಸೂಚನೆ ಬಿಡುಗಡೆ.
ದೇಶಾದ್ಯಂತ ಒಟ್ಟು 108 ಹುದ್ದೆಗಳು ಖಾಲಿ ಇದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗಿರುವಂತಹ ಶೈಕ್ಷಣಿಕ ಅರ್ಹತೆಗಳ ಮಾಹಿತಿ ಹಾಗೂ ಇತರೆ ನೇಮಕಾತಿಯ ಮಾಹಿತಿಯನ್ನು ನಾವು ಕೆಳಗಿನ ಭಾಗದಲ್ಲಿ ಲೇಖನದಲ್ಲಿ ತಿಳಿಸಿರುತ್ತೇವೆ. ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಈ ನೇಮಕಾತಿಗೆ ನಿಗದಿಪಡಿಸಿರಬೇಕು ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಿ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರಬೇಕಾದ ಶೈಕ್ಷಣಿಕ ಅರ್ಹತೆಗಳು :
ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ರಾಷ್ಟ್ರೀಯ ಬ್ಯಾಂಕನಲ್ಲಿ ಖಾಲಿ ಇರುವ ಆಫೀಸ್ ಅಟೆಂಡೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಶಿಕ್ಷಣ ಮಂಡಳಿಯಿಂದ 10ನೇ ತರಗತಿ ಪಾಸ್ ಆಗಿದ್ದರೆ ಸಾಕು ಅರ್ಜಿ ಸಲ್ಲಿಸಬಹುದು.
ವಯೋಮಿತಿ ಅರ್ಹತೆ – ನೀವು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ಹೊಂದಿರಬೇಕು ಮತ್ತು ಗರಿಷ್ಠ 30 ವರ್ಷದ ಒಳಗಿರಬೇಕು.
ನೇಮಕಾತಿ ಪ್ರಕ್ರಿಯೆಯಲ್ಲಿ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಸಿಗುವ ಮಾಸಿಕ ಸಂಬಳ :
ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ರಾಷ್ಟ್ರೀಯ ಬ್ಯಾಂಕ್ ಹೊರಡಿಸಿರುವ ಅಧಿಕೃತ ಅಧಿಸೂಚನೆಯ ಪ್ರಕಾರ ಆಫೀಸ್ ಅಟೆಂಡೆಂಟ್ ಹುದ್ದೆಗಳಿಗೆ ನೇಮಕಗೊಂಡ ಅಭ್ಯರ್ಥಿಗಳಿಗೆ ಮಾಸಿಕ ವೇತನವು 35,000ರೂ. ಇರಲಿದೆ
ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು :
* ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಅಕ್ಟೋಬರ್ 2, 2024 ರಿಂದ ಆನ್ಲೈನ್ ಪ್ರಕ್ರಿಯೆ ಆರಂಭವಾಗುತ್ತದೆ.
* ಈ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 21 ಅಕ್ಟೋಬರ್ 2024
ಅರ್ಹರಿರುವ ಅಭ್ಯರ್ಥಿಗಳು ನಿಗದಿಪಡಿಸಿದ ದಿನಾಂಕದ ಒಳಗಾಗಿ ಈ ಕೆಳಗಿನ ಜಾಲತಾಣಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಿರಿ.
ಅರ್ಜಿ ಲಿಂಕ್ : https://www.nabard.org
ಇನ್ನಷ್ಟು ಸುದ್ದಿಗಳು:
ಇಸ್ರೋ ಸಂಸ್ಥೆಯಲ್ಲಿ SSLC ಪಾಸಾದವರಿಗೂ ಉದ್ಯೋಗಾವಕಾಶ | ISRO Recruitment 2024
ದ್ವಿತೀಯ ಪಿಯುಸಿ ಪಾಸ್ ಆದವರಿಗೆ ನೌಕಾಪಡೆಯಲ್ಲಿ ಉದ್ಯೋಗಾವಕಾಶ: ವೇತನ ₹47,600/-
10ನೇ ತರಗತಿ—ಪದವಿ ಪೂರೈಸಿದವರಿಗೆ ಗ್ಯಾಸ್ ಅಥಾರಿಟಿ ಲಿಮಿಟೆಡ್ ನಲ್ಲಿದೆ ಉದ್ಯೋಗ: ಸಂಬಳ 1.38 ಲಕ್ಷ