5:32 AM Saturday 15 - November 2025

ಎದೆನೋವಿನಿಂದ ಆಸ್ಪತ್ರೆಗೆ ದಾಖಲಾದ ನಾದ ಬ್ರಹ್ಮ ಹಂಸಲೇಖ 

hamsalekha
10/10/2022

ಖ್ಯಾತ ಸಂಗೀತ ನಿರ್ದೇಶಕ, ನಾದ ಬ್ರಹ್ಮ ಹಂಸಲೇಖ  ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು, ಈ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ ರಾಜಾಜಿನಗರದ ಫಸ್ಟ್ ಬ್ಲಾಕ್ ನಲ್ಲಿರುವ ಅಪೋಲೊ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಈ ಹಿಂದೆ ಹಂಸಲೇಖ ಅವರು ಓಪನ್ ಹಾರ್ಟ್ ಸರ್ಜರಿ ಮಾಡಿಸಿಕೊಂಡಿದ್ದರು. ಹೀಗಾಗಿ ಎದೆ ನೋವಿನಿಂದ ಅವರು ಆಸ್ಪತ್ರೆಗೆ ದಾಖಲಾಗಿರುವ ಸುದ್ದಿ ತಿಳಿದು ಅಭಿಮಾನಿಗಳು ಆತಂಕಕ್ಕೀಡಾಗಿದ್ದರು.

ಆದರೆ ಆರೋಗ್ಯ ತಪಾಸಣೆಯ ಬಳಿಕ, ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಎದೆನೋವು ಕಾಣಿಸಿಕೊಂಡಿದೆ ಎಂದು ತಿಳಿದು ಬಂದಿದ್ದು, ಹೀಗಾಗಿ ಅಭಿಮಾನಿಗಳು ನಿಟ್ಟುಸಿರುಬಿಟ್ಟಿದ್ದಾರೆ.

ಇನ್ನೂ ವೈದ್ಯರ ಸಲಹೆಯ ಮೇರೆಗೆ ಹಂಸಲೇಖ ಅವರು ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರು ಶೀಘ್ರವೇ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ ಎಂದು ತಿಳಿದು ಬಂದಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ

Exit mobile version