ನದಿಯ ಆಳ ತಿಳಿಯದೇ ಈಜಲು ಇಳಿದ ಯುವಕನ ದುರಂತ ಸಾವು! - Mahanayaka

ನದಿಯ ಆಳ ತಿಳಿಯದೇ ಈಜಲು ಇಳಿದ ಯುವಕನ ದುರಂತ ಸಾವು!

ulaibettu
24/07/2022


Provided by

ಕೈಕಂಬ: ಸ್ನೇಹಿತರೊಂದಿಗೆ ನದಿಗೆ ಈಜಲು ತೆರಳಿದ್ದ ಯುವಕನೋರ್ವ ನೀರುಪಾಲಾದ ಘಟನೆ ಉಳಾಯಿಬೆಟ್ಟು ಬದ್ರಿಯ ನಗರದಲ್ಲಿ ಭಾನುವಾರ ಸಂಜೆ ನಡೆದಿದೆ.

ಜೋಕಟ್ಟೆ ನಿವಾಸಿ ಆದಂ ಎಂಬವರ ಪುತ್ರ ಮುಹಮ್ಮದ್ ಶಿಯಾಝ್ (19) ಮೃತಪಟ್ಟ ಯುವಕ ಎಂದು ತಿಳಿದು ಬಂದಿದೆ.

ರವಿವಾರ ಬೆಳಗ್ಗೆ ಶಿಯಾಝ್ ಅವರು ಕೈಕಂಬ ಸಮೀಪದ ಉಳಾಯಿಬೆಟ್ಟುನಲ್ಲಿರುವ ತನ್ನ ಸಂಬಂಧಿಕರ ಮನೆಗೆ ತೆರಳಿದ್ದರು.

ಅಲ್ಲಿಂದ ಸ್ನೇಹಿತರೊಂದಿಗೆ‌ ಬದ್ರಿಯಾ ನಗರದ ಪೆರ್ಮುಂಕಿ ಕಾಯರ ಪದವುನಲ್ಲಿರುವ ನದಿಗೆ ಈಜಲು ತೆರಳಿದ್ದಾರೆ. ನದಿಯ ಆಳ ತಿಳಿಯದೇ ಈಜಲು ಇಳಿದ ಪರಿಣಾಮ ಅವರು ನೀರುಪಾಲಾಗಿದ್ದಾರೆ ಎನ್ನಲಾಗಿದೆ.

ತಕ್ಷಣ ಸ್ಥಳೀಯರು ಅವರನ್ನು ರಕ್ಷಿಸಲು ಪ್ರಯತ್ನಿಸಿದರಾದರೂ ಅವರನ್ನು ಉಳಿಸಲು ಸಾಧ್ಯವಾಗಿಲ್ಲ ಎಂದು ತಿಳಿದು ಬಂದಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.

ಸುರತ್ಕಲ್ ಎಂಆರ್ ಪಿಎಲ್ ನಲ್ಲಿ ಕೆಲಸ ಮಾಡುತ್ತಿದ್ದ ಸಿಯಾಝ್ ಅವರು ತಂದೆ, ತಾಯಿ, ಓರ್ವ ಸಹೋದರಿ, ಸಹೋದರನನ್ನು ಅಗಲಿದ್ದಾರೆ.

ಜೋಕಟ್ಟೆ ಮಸೀದಿಯ ಖಬರಸ್ಥಾನದಲ್ಲಿ ಅಂತ್ಯಸಂಸ್ಕಾರ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ