ತಾಯಿಯೊಂದಿಗೆ ಆಸ್ಪತ್ರೆಗೆ ಬಂದಿದ್ದ ಯುವಕ ನದಿಗೆ ಹಾರಿ ಸಾವಿಗೆ ಶರಣು! - Mahanayaka

ತಾಯಿಯೊಂದಿಗೆ ಆಸ್ಪತ್ರೆಗೆ ಬಂದಿದ್ದ ಯುವಕ ನದಿಗೆ ಹಾರಿ ಸಾವಿಗೆ ಶರಣು!

kundapura
29/01/2023

ಕುಂದಾಪುರ: ತಾಯಿಯೊಂದಿಗೆ ಆಸ್ಪತ್ರೆಗೆ ಬಂದಿದ್ದ ಯುವಕನೋರ್ವ ನದಿಗೆ ಹಾರಿ ಸಾವಿಗೆ ಶರಣಾದ ಘಟನೆ ತಲ್ಲೂರು ಸಮೀಪದ ರಾಜಾಡಿ ಸೇತುವೆ ಬಳಿ ನಡೆದಿದೆ.

ಕನ್ಯಾನ ಗ್ರಾಮದ ಗುಡ್ಡೆಯಂಗಡಿ ನಿವಾಸಿ ರವಿರಾಜ್ ಶೆಟ್ಟಿ (33) ಸಾವಿಗೆ ಶರಣಾದ ಯುವಕನಾಗಿದ್ದಾರೆ.  ಅನಾರೋಗ್ಯದಿಂದ ಬಳಲುತ್ತಿದ್ದ ರವಿರಾಜ್ ಶನಿವಾರ ಬೆಳಿಗ್ಗೆ ತನ್ನ ತಾಯಿಯೊಂದಿಗೆ ಆಸ್ಪತ್ರೆಗೆ ಬಂದಿದ್ದರು. ಚಿಕಿತ್ಸೆ ಪಡೆದು ಮನೆಗೆ ವಾಪಾಸಾಗುತ್ತಿದ್ದಾಗ ಇದ್ದಕ್ಕಿದ್ದಂತೆ ತಲ್ಲೂರು ಸಮೀಪದ ರಾಜಾಡಿಯ ಹೆದ್ದಾರಿಯಲ್ಲಿರುವ ಸೇತುವೆ ಮೇಲಿನಿಂದ ನದಿಗೆ ಹಾರಿದ್ದಾರೆ.

ಮೃತದೇಹ ಮೇಲೆತ್ತಲು ಸ್ಥಳೀಯ ಯುವಕರು ಸಹಕರಿಸಿದ್ದಾರೆ. ಸ್ಥಳದಲ್ಲಿ ನೂರಾರು‌ ಮಂದಿ ಜಮಾಯಿಸಿದ್ದರಿಂದ ಕೆಲ‌ಕಾಲ‌ ರಾಜಾಡಿ ಸೇತುವೆಯ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸಂಚಾರ ವ್ಯತ್ಯಯ‌ ಉಂಟಾಯಿತು. ಸ್ಥಳಕ್ಕಾಗಮಿಸಿದ‌ ಪೊಲೀಸರು ವಾಹನಗಳ ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರು. ಈ ಬಗ್ಗೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ