ಮಹಾಕುಂಭ ಮೇಳ ಕಾಲ್ತುಳಿತದಲ್ಲಿ ಕರ್ನಾಟಕ ಮೂಲದ ನಾಗಸಾಧು ಬಲಿ!

ಚಿತ್ರದುರ್ಗ: ಉತ್ತರಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ನಡೆದ ಕಾಲ್ತುಳಿತದಲ್ಲಿ 30 ಜನರು ಸಾವನ್ನಪ್ಪಿದ್ದರು. ಇದೀಗ ಕರ್ನಾಟಕದ ಚಿತ್ರದುರ್ಗ ಮೂಲದ ನಾಗಸಾಧುವೊಬ್ಬರು ಕೂಡ ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ.
ರಾಜನಾಥ್ ಮಹಾರಾಜ್(49) ಸಾವನ್ನಪ್ಪಿದ ನಾಗಸಾಧು ಎಂದು ಗುರುತಿಸಲಾಗಿದೆ. ಮೃತ ನಾಗಸಾಧು ಬಂಜಾರ ಗುರುಪೀಠದ ಪೀಠಾಧಿಪತಿ ಸರ್ಧಾರ್ ಸೇವಾಲಾಲ್ ಶ್ರೀಗಳ ಒಡನಾಡಿಯಾಗಿದ್ದರು ಎಂದು ತಿಳಿದು ಬಂದಿದೆ.
ರಾಜನಾಥ್ ಮಹಾರಾಜ್ ಕಳೆದ 7 ವರ್ಷಗಳಿಂದ ಚಿತ್ರದುರ್ಗದ ಬಂಜಾರ ಗುರು ಪೀಠದಲ್ಲಿ ನೆಲೆಸಿದ್ದರು. ಕಳೆದ 15 ದಿನಗಳ ಹಿಂದೆ ಇವರು ಕುಂಭಮೇಳದಲ್ಲಿ ಭಾಗಿಯಾಗಲು ತೆರಳಿದ್ದರು. ಸದ್ಯ ರಾಜನಾಥ್ ಮಹಾರಾಜ್ ಅವರ ಮೃತದೇಹವನ್ನ ಚಿತ್ರದುರ್ಗಕ್ಕೆ ತರುವಂತೆ ಚಿತ್ರದುರ್ಗದ ಲಂಬಾಣಿ ಸೇವಾಲಾಲ್ ಗುರುಪೀಠದ ಪೀಠಾಧಿಪತಿ ಮನವಿ ಮಾಡಿಕೊಂಡಿದ್ದಾರೆ.
ಕುಂಭಮೇಳದಲ್ಲಿ ಕರ್ನಾಟಕದ ಬೆಳಗಾವಿ ಮೂಲದ ನಾಲ್ವರು ಕಾಲ್ತುಳಿತಕ್ಕೆ ಬಲಿಯಾಗಿದ್ದರು. ಇದೀಗ ರಾಜನಾಥ್ ಮಹಾರಾಜ್ ಕೂಡ ಕಾಲ್ತುಳಿತಕ್ಕೆ ಬಲಿಯಾಗಿರುವುದು ಬೆಳಕಿಗೆ ಬಂದಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: